ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ 19ರಂದು ರಾಜ್ಯ ಮಟ್ಟದ ಎಸ್‍ಟಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.
ವಾಲ್ಮೀಕಿ ಸಮಾಜ ಸೇರಿ ಸುಮಾರು 52 ಎಸ್‍ಟಿ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಸಿಟಿ ರವಿ, ರಮೇಶ್ ಜಾರಕಿಹೊಳಿ ಮತ್ತಿತರರು ಭಾಗವಹಿಸುತ್ತಾರೆ. ಸ್ಥಳೀಯ ಮುಖಂಡರೂ ಪಾಲ್ಗೊಳ್ಳಲಿದ್ದಾರೆ ಎಂದರು.
ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಅವರ ಹೆಸರನ್ನು ನಾಮಕರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ವಾಲ್ಮೀಕಿ ಸಮಾಜದ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುವುದಾಗಿಯೂ ಅವರು ಹೇಳಿದರು. ಇದೇ ವೇಳೆ ಪಕ್ಷವು ತಮಗೆ ಈ ಜವಾಬ್ದಾರಿ ನೀಡಿದ್ದಕ್ಕೂ ಧನ್ಯವಾದ ಳಿಸಿದರು.
ಕಾಂಗ್ರೆಸ್ಸಿಗರ ಹೇಳಿಕೆಯಿಂದ ರಾಮಭಕ್ತರಿಗೆ ನೋವು:ಕಾಂಗ್ರೆಸ್ ಮತ್ತು ಕಾಂಗ್ರೆಸ್ಸಿನ ಮುಖಂಡರು ತಮ್ಮ ಹೇಳಿಕೆಗಳಿಂದ ಕೋಟ್ಯಂತರ ರಾಮಭಕ್ತರ ಮನಸ್ಸಿಗೆ ನೋವನ್ನುಂಟು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ತಿಳಿಸಿದರು.