ಬೆಂಗಳೂರು:ಕೇರಳದಲ್ಲಿ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು, ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಭಾರಿ ಮಳೆಯಾಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಾನ್ಸೂನ್ ತೀವ್ರತೆಯಿಂದ ಭಾರೀ ಮಳೆ ನಿರೀಕ್ಷೆ: ಕರಾವಳಿ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ರಾಜ್ಯದ ಕರಾವಳಿ ಹಾಗೂ ಮಲೆನಾಡು, ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಭಾರಿ ಮಳೆಯಾಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈ ಬಗ್ಗೆ ಮಾತನಾಡಿದ ಹವಾಮಾನ ಇಲಾಖೆ ನಿರ್ದೇಶಕರಾದ ಸಿಎಸ್ ಪಾಟೀಲ್, ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಕೆಲವು ಭಾಗಾಗಳಲ್ಲೂ ಗಾಳಿ ವೇಗ ಹೆಚ್ಚಿದೆ. ಹೀಗಾಗಿ ಮುಂಗಾರು ಮಳೆ ಪ್ರಮಾಣ ರಾಜ್ಯದ ಕರಾವಳಿ ಹಾಗೂ ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತೀವ್ರವಾಗುವುದರಿಂದ ನಾಳೆ ಬೆಳಗ್ಗೆ 8-30 ರ ವರೆಗೆ ಸದ್ಯ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಸಿಎಸ್ ಪಾಟೀಲ್ ತಿಳಿಸಿದರು.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ, ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲದೆ ಸಿಲಿಕಾನ್ ಸಿಟಿ, ಚಿಕ್ಕಬಳ್ಳಾಪುರದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.