ಕರ್ನಾಟಕ

karnataka

ETV Bharat / state

ಪಿಎಸ್ಐ ಅಕ್ರಮ: ಬಡ್ತಿ ಪ್ರಕ್ರಿಯೆ ಪೂರ್ಣಗೊಳಿಸಲು ಮುಂದಾದ ಪೊಲೀಸ್ ಇಲಾಖೆ - ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್

ರಾಜ್ಯದ ಆಯಾ ಜಿಲ್ಲೆ, ಕಮಿಷನರೇಟ್​ ವ್ಯಾಪ್ತಿಯಲ್ಲಿ ಸದ್ಯ ಬಡ್ತಿಗೆ ಅರ್ಹರಿರುವ ಪೊಲೀಸ್ ಸಿಬ್ಬಂದಿ ಮಾಹಿತಿಯನ್ನು ಪೊಲೀಸ್ ಪ್ರಧಾನ ಕಚೇರಿಗೆ ಸಲ್ಲಿಸುವಂತೆ ಪ್ರವೀಣ್ ಸೂದ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

DG-IGP Praveen Sood
ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್

By

Published : May 7, 2022, 10:42 PM IST

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯಿಂದಾಗಿ ಇಲಾಖೆಯೊಳಗಿನ ಮುಂಬಡ್ತಿ ಪ್ರಕ್ರಿಯೆ ವಿಳಂಬವಾಗದಂತೆ ತಡೆಯಲು ರಾಜ್ಯ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸುತ್ತೋಲೆ ಹೊರಡಿಸಿದ್ದಾರೆ.

ಸಿಐಡಿಯಿಂದ ನಡೆಯುತ್ತಿರುವ ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಇನ್ನೂ ಸ್ವಲ್ಪ ದಿನಗಳ ಕಾಲ ಮುಂದುವರೆಯಲಿದೆ. ತನಿಖೆ ಪೂರ್ಣಗೊಳ್ಳುವವರೆಗೂ ವಿಳಂಬವಾಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ಮುಂಬಡ್ತಿ ಪ್ರಕ್ರಿಯೆ ಶೀಘ್ರವಾಗಿ ಪೂರ್ಣಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದೆ.

ರಾಜ್ಯದ ಆಯಾ ಜಿಲ್ಲೆ, ಕಮಿಷನರೇಟ್​ ವ್ಯಾಪ್ತಿಯಲ್ಲಿ ಸದ್ಯ ಬಡ್ತಿಗೆ ಅರ್ಹರಿರುವ ಪೊಲೀಸ್ ಸಿಬ್ಬಂದಿ ಮಾಹಿತಿಯನ್ನು ಪೊಲೀಸ್ ಪ್ರಧಾನ ಕಚೇರಿಗೆ ಸಲ್ಲಿಸುವಂತೆ ಪ್ರವೀಣ್ ಸೂದ್ ತಮ್ಮ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್‌ನವರದು ತಪ್ಪಿದ್ರೂ ಬಂಧಿಸಿ.. ನಾ ಎಲ್ಲಿಯೂ ಓಡಿ ಹೋಗಿಲ್ಲ, CID ನೋಟಿಸ್​​ಗೆ ಲಿಖಿತ ಉತ್ತರ ನೀಡಿದ್ದೇನೆ : ಪ್ರಿಯಾಂಕ್ ಖರ್ಗೆ

ABOUT THE AUTHOR

...view details