ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗು ಹಾವೇರಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ನಾಳೆಯೂ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಇಂದು ಮತ್ತು ನಾಳೆ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಮುನ್ನೆಚ್ಚರಿಕೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕ, ಹಗುರದಿಂದ ಸಾಧಾರಣವಾಗಿ ಮಳೆಯಾಗಲಿದೆ. ಇಂದು ಸಂಜೆ ಹಲವೆಡೆ ಸಾಧಾರಣ ಮಳೆಯಾಗಿದೆ.
ಇದಲ್ಲದೆ ಇಂದು ಮತ್ತು ನಾಳೆ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.