ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಳೆದ ಮೂರು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಉತ್ತರ ಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರಿಯಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ
ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮಳೆಯುಂಟಾಗುತ್ತಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 6ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.