ಕರ್ನಾಟಕ

karnataka

ETV Bharat / state

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ

ವಾರದಲ್ಲಿ ಒಮ್ಮೆಯಾದರೂ ಜಿಲ್ಲೆಗಳಿಗೆ ತೆರಳಿ ಕೋವಿಡ್ ನಿರ್ವಹಣೆ, ಅಭಿವೃದ್ಧಿ ಕಾರ್ಯದ ಪರಿಶೀಲನೆ ನಡೆಸುತ್ತೇನೆ. ಇದರಿಂದ ಜಿಲ್ಲೆಗಳಲ್ಲಿನ ವಾಸ್ತವ ಸ್ಥಿತಿ ತಿಳಿಯಲು ಅವಕಾಶವಾಗಲಿದೆ..

Statement by CM BS Yediyurappa
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ

By

Published : Jun 13, 2021, 2:33 PM IST

ಬೆಂಗಳೂರು : ಅನ್‌ಲಾಕ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಬೆಂಗಳೂರಿಗೆ ವಾಪಸಾಗುವವರಿಗೆ ಕೊರೊನಾ ತಪಾಸಣೆ ನಡೆಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ರಾಜಧಾನಿಗೆ ಮರು ವಲಸೆ ಬರುವವರಿಗೆ ಕೋವಿಡ್ ಟೆಸ್ಟ್ ಸಂಕಷ್ಟ ಎದುರಾಗಲಿದೆ.

ಜಿಲ್ಲಾ ಪ್ರವಾಸ ಮುಗಿಸಿ ವಾಪಸಾದ ಸಿಎಂ, ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅನ್‌ಲಾಕ್ ಬಳಿಕ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಳವಾಗಲಿದೆ. ಸೋಂಕು ಹರಡುವ ಸಾಧ್ಯತೆ ಕೂಡ ಇದೆ. ಹೀಗಾಗಿ, ನಾನು ಅಧಿಕಾರಿಗಳ ಜೊತೆ ಮಾತನಾಡಿ ಬೆಂಗಳೂರಿಗೆ ಬರುವವರಿಗೆ ಕಠಿಣ ಪರೀಕ್ಷೆ ಮಾಡಲು ಸೂಚಿಸುತ್ತೇನೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಕೊರೊನಾ ಪರೀಕ್ಷೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ

ವಾರಕ್ಕೊಮ್ಮೆ ಜಿಲ್ಲಾ ಪ್ರವಾಸ :ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯದ ಬಗ್ಗೆ ಪರಿಶೀಲನೆ ಮಾಡಿ ಬಂದಿದ್ದೇನೆ. ವಾರದಲ್ಲಿ ಒಮ್ಮೆಯಾದರೂ ಜಿಲ್ಲೆಗಳಿಗೆ ತೆರಳಿ ಕೋವಿಡ್ ನಿರ್ವಹಣೆ, ಅಭಿವೃದ್ಧಿ ಕಾರ್ಯದ ಪರಿಶೀಲನೆ ನಡೆಸುತ್ತೇನೆ. ಇದರಿಂದ ಜಿಲ್ಲೆಗಳಲ್ಲಿನ ವಾಸ್ತವ ಸ್ಥಿತಿ ತಿಳಿಯಲು ಅವಕಾಶವಾಗಲಿದೆ.

ಹಾಸನದಲ್ಲಿ ಏರ್ಪೋರ್ಟ್ ಕೆಲಸ ನಡೆಯುತ್ತಿದೆ. ಆದಷ್ಟು ಬೇಗ ಮಾಜಿ ಪ್ರಧಾನಿ ದೇವೇಗೌಡರ ಜೊತೆ ಶಂಕುಸ್ಥಾಪನೆ ಕಾರ್ಯ ಮಾಡುತ್ತೇನೆ, ಅಭಿವೃದ್ಧಿ ಕಾರ್ಯ ಕೂಡ ಮಾಡಲಾಗುವುದು ಎಂದರು. ಖಾಸಗಿ ಶಾಲೆಗಳ ಫೀಸ್ ಕಡಿಮೆ ಮಾಡದ ವಿಚಾರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಮಾತನಾಡುತ್ತೇನೆ. ಆ ಬಗ್ಗೆ ಪರಿಶೀಲನೆ ಮಾಡಲು ಸೂಚಿಸುತ್ತೇನೆ ಎಂದರು.

ದಿಗ್ವಿಜಯ ಸಿಂಗ್ ರದ್ದು ತಿರುಕನ ಕನಸು: ದಿಗ್ವಿಜಯ ಸಿಂಗ್ ಆರ್ಟಿಕಲ್ 370 ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ತಿರುಕನ ಕನಸು ಕಾಣುವವರಿಗೆ ನಾನು ಏನೂ ಹೇಳೋದಿಲ್ಲ. ಅವರ ನಾಯಕತ್ವದ ಕೊರತೆಯಿಂದ ಪಕ್ಷ ಎಲ್ಲಿದೆ ಅನ್ನೋದು ಗೊತ್ತಿದೆ. ಕಾಂಗ್ರೆಸ್ ಪರಿಸ್ಥಿತಿ ಹೇಗಿದೆ ಅನ್ನೋದು ಎಲ್ಲರೂ ಗಮನಿಸಿದ್ದಾರೆ ಎಂದು ಟಾಂಗ್ ನೀಡಿದರು. ‌

ಅರುಣ್ ಸಿಂಗ್ ಸಭೆಗೆ ಸಹಕಾರ :ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದಿನವಾರ ಬೆಂಗಳೂರಿಗೆ ಬರುತ್ತಿದ್ದಾರೆ. ಸಚಿವರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ನಾನು ಸಹ ಅವರ ಜೊತೆಯಲ್ಲಿದ್ದು, ಸಹಕಾರ ನೀಡುತ್ತೇನೆ ಎಂದರು.

ABOUT THE AUTHOR

...view details