ಕರ್ನಾಟಕ

karnataka

ETV Bharat / state

ಮೇಕೆದಾಟು ಯೋಜನೆ ಬಗ್ಗೆ ಕಾನೂನಾತ್ಮಕವಾಗಿ ಚರ್ಚೆ ನಡೆಸಿ ತೀರ್ಮಾನ: ಬೊಮ್ಮಾಯಿ - ಸಚಿವ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಮೇಕೆದಾಟು ಯೋಜನೆ ಸಂಬಂಧ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸುವ ಹಿನ್ನೆಲೆ ಎನ್​ಜಿಟಿ ಸಮಿತಿ ರಚಿಸಿ ಸುಮೊಟೋ ಕೇಸ್ ದಾಖಲಿಸಿಕೊಂಡಿದೆ‌. ಈ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿದ್ದು, ಈಗಾಗಲೇ ಸುಪ್ರೀಂ ಕೋರ್ಟ್ ಹಾಗೂ ಎನ್​ಜಿಟಿಗೆ ಯೋಜನೆ ವಿವರ ಸಲ್ಲಿಸಲಾಗಿದೆ‌. ಅಧಿಕೃತವಾಗಿ ರಾಜ್ಯದಿಂದ ಯಾವುದೇ ದೂರು ಎನ್​ಜಿಟಿಗೆ ಹೋಗಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ
ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

By

Published : May 26, 2021, 1:36 PM IST

Updated : May 26, 2021, 1:50 PM IST

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನ ಕುರಿತಂತೆ ರಾಷ್ಟೀಯ ಹಸಿರು ಪೀಠ (ಎನ್ ಜಿಟಿ) ರಚಿಸಲಾಗಿರುವ ಸಮಿತಿಯು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಕಾನೂನಾತ್ಮಕವಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ರಾಜ್ಯದಲ್ಲಿ ಮೇಕೆದಾಟು ಯೋಜನೆ ಸಂಬಂಧ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸುವ ಹಿನ್ನೆಲೆ ಎನ್​ಜಿಟಿ ಸಮಿತಿ ರಚಿಸಿ ಸುಮೊಟೋ ಕೇಸ್ ದಾಖಲಿಸಿಕೊಂಡಿದೆ‌. ಈ ಬಗ್ಗೆ ಸುಪ್ರೀಂ ಕೋರ್ಟ್​ನಲ್ಲಿ ಕೇಸ್ ನಡೆಯುತ್ತಿದ್ದು, ಈಗಾಗಲೇ ಸುಪ್ರೀಂ ಕೋರ್ಟ್ ಹಾಗೂ ಎನ್​ಜಿಟಿಗೆ ಯೋಜನೆ ವಿವರ ಸಲ್ಲಿಸಲಾಗಿದೆ‌. ಅಧಿಕೃತವಾಗಿ ರಾಜ್ಯದಿಂದ ಯಾವುದೇ ದೂರು ಎನ್​ಜಿಟಿಗೆ ಹೋಗಿಲ್ಲ. ಸದ್ಯ ಸುಮೊಟೋ ಕೇಸ್ ಸಂಬಂಧ ರಾಜ್ಯದ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸಲಾಗುತ್ತದೆ‌‌. ಅಂತಿಮವಾಗಿ ನಾಳೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಜೂನ್ 7ರ ಬಳಿಕ ಸಿಎಂ ಬದಲಾವಣೆ ವದಂತಿ ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಯಾವ ಬದಲಾವಣೆಯೂ ಇಲ್ಲ. ಊಹಾಪೋಹದ ಮಾತುಗಳಿಗೆ ಉತ್ತರ ಕೊಡುವುದಿಲ್ಲ ಎಂದರು‌. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ನಡೆಸುತ್ತಿದೆ. ಹೆಚ್ಚಿನ ಮಾಹಿತಿಗಾಗಿ ಎಸ್​​ಐಟಿ ಅವರನ್ನೇ ಕೇಳಿ ಎಂದು ಮಾಹಿತಿ ನೀಡದೆ ನಿರ್ಗಮಿಸಿದರು.

Last Updated : May 26, 2021, 1:50 PM IST

ABOUT THE AUTHOR

...view details