ಬೆಂಗಳೂರು:ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸೆ.19ರಂದು ರಾಜ್ಯದಾದ್ಯಂತ ಇ-ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸೇವೆಯನ್ನು ಬಳಸಿಕೊಳ್ಳಲು ವಕೀಲರು ಹಾಗೂ ಕಕ್ಷೀದಾರರು ಮುಂದಾಗಬೇಕೆಂದು ಕೆಎಸ್ಎಲ್ಎಸ್ಎ ಸದಸ್ಯ ಕಾರ್ಯದರ್ಶಿ, ನ್ಯಾ. ಎಚ್. ಶಶಿಧರ ಶೆಟ್ಟಿ ಮನವಿ ಮಾಡಿದ್ದಾರೆ.
ಸೆಪ್ಟೆಂಬರ್ 19ರಂದು ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಮೆಗಾ ಇ-ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಜನತಾ ನ್ಯಾಯಾಲಯಗಳಲ್ಲಿ ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಅಥವಾ ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ನೇರವಾಗಿ ಭೇಟಿ ನೀಡಿ ಪಡೆದುಕೊಳ್ಳಬಹುದು ಎಂದಿದ್ದಾರೆ.
ಹಾಗೆಯೇ ಪ್ರಾಧಿಕಾರದಿಂದ ಅನ್ಲೈನ್ ಮೂಲಕ, ವಿಡಿಯೋ ಕಾನ್ಫರೆನ್ಸ್ ಮೂಲಕ ಅಥವಾ ಇ-ಮೇಲ್, ವಾಟ್ಸಾಪ್ ಮೂಲಕವೂ ಪಡೆದುಕೊಳ್ಳಬಹುದು ಎಂದು ಕೆಎಸ್ಎಲ್ಎಸ್ಎ ತಿಳಿಸಿದೆ.