ಕರ್ನಾಟಕ

karnataka

ETV Bharat / state

ಸಿಲಿಕಾನ್​ ಸಿಟಿಯಲ್ಲಿ ಗುಂಡಿನ ಮೊರೆತ:  ಅಪರಿಚಿತರಿಂದ ವ್ಯಕ್ತಿ ಮೇಲೆ ಫೈರಿಂಗ್​ - undefined

ಬೆಂಗಳೂರಲ್ಲಿ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗುಂಡಿನ‌ ದಾಳಿ

By

Published : May 4, 2019, 1:02 PM IST

ಬೆಂಗಳೂರು: ರಾಜಧಾನಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.‌ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಔಟರ್ ರಿಂಗ್ ರಸ್ತೆಯ ಹೆಚ್.ಬಿ.ಆರ್ ಲೇಔಟ್ ಬಳಿ ಈ ಘಟನೆ ನಡೆದಿದೆ.

ಹೆಚ್.ಬಿ.ಆರ್ ಲೇಔಟ್ ಬಳಿ ನಿನ್ನೆ ರಾತ್ರಿ 9.40ರ ಸುಮಾರಿಗೆ ಆಕ್ಟೀವಾ ಗಾಡಿಯಲ್ಲಿ ಬಂದ ಇಬ್ಬರು ಆಗಂತುಕರು ಸೈಯದ್ ಜುಬೇರ್ ಎಂಬುವರ ಮೇಲೆ ಗುಂಡು ಹಾರಿಸಿದ್ದಾರೆ.ಆ್ಯಕ್ಟೀವಾದಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಬ್ಯಾಗ್​​ನೊಳಗೆ ಪಿಸ್ತೂಲ್ ತೆಗೆದುಕೊಂಡು ಜುಬೇರ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಗುಂಡೇಟಿನಿಂದ ಗಾಯಗೊಂಡ ಜುಬೇರ್​​ನನ್ನ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರು ಭೇಟಿ‌‌ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details