ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ವ್ಯಾಕ್ಸಿನ್ ಹಾಕಲು ನಿರ್ಧರಿಸಲಾಗಿದೆ. ನಿತ್ಯ 300-400 ನಾಯಿಗಳಿಗೆ ವ್ಯಾಕ್ಸಿನ್ ಹಾಕುವ ಗುರಿ ಇರಿಸಿಕೊಂಡಿದ್ದು ಪಾಲಿಕೆ ಸಹಕಾರದೊಂದಿಗೆ ವ್ಯಾಕ್ಸಿನೇಷನ್ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಿ ಹಾವಳಿ ಬಗ್ಗೆ ಬಿಬಿಎಂಪಿ ವ್ಯಾಪ್ತಿಯಿಂದ ಸಾಕಷ್ಟು ದೂರು ಬರುತ್ತಿವೆ. ಈಗಾಗಲೇ ಈ ಬಗ್ಗೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಮೂರು ಲಕ್ಷ ನಾಯಿಗಳಿವೆ ಎಂದು ಅಂದಾಜಿಸಲಾಗಿದ್ದು, ವ್ಯಾಕ್ಸಿನೇಷನ್ ಸಂಖ್ಯೆ ಹೆಚ್ಚಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.