ಕರ್ನಾಟಕ

karnataka

ETV Bharat / state

ಲಾಕ್‌ಡೌನ್ ಯಶಸ್ವಿಗಾಗಿ ಇನ್ನಷ್ಟು ಬಿಗಿ ಕ್ರಮ: ಬಸವರಾಜ ಬೊಮ್ಮಾಯಿ

ಲಾಕ್‌ಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

strict action for success of lock down
ಲಾಕ್‌ಡೌನ್ ಯಶಸ್ವಿಗಾಗಿ ಇನ್ನಷ್ಟು ಬಿಗಿ ಕ್ರಮ

By

Published : May 20, 2021, 1:02 PM IST

Updated : May 20, 2021, 1:23 PM IST

ಬೆಂಗಳೂರು:ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್‌ಡೌನ್ ನಿಯಮಗಳನ್ನು ಜನರು ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್‌ಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಜನರು ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. ಯಾದಗಿರಿಯಲ್ಲಿ ಮದುವೆಗೆ ಮೋಟಾರ್​​ ಸೈಕಲ್​ನಲ್ಲಿ ಐದು ಜನ ತೆರಳುತ್ತಿರುವುದು ಬೆಳಕಿಗೆ ಬಂದಿದೆ‌. ಹೀಗಾಗಿ ವಾಹನಗಳನ್ನು ಸೀಜ್ ಮಾಡುವ ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ ಜಾರಿಗೊಳಿಸಲಾಗುವುದು. ಈಗ ಜಾರಿಯಲ್ಲಿರುವ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸುವ ಮೂಲಕ ಲಾಕ್​ಡೌನ್​​ ಯಶಸ್ವಿಗೊಳಿಸಲಾಗುವುದು ಎಂದು ತಿಳಿಸಿದರು.

ಗ್ರಾಮಾಂತರ ಪ್ರದೇಶಗಳಲ್ಲಿ ಜಿಲ್ಲಾಧಿಕಾರಿಗಳು ಮೂರ್ನಾಲ್ಕು ದಿನಗಳ ಕಾಲ ನಿರಂತರವಾಗಿ ಲಾಕ್​ಡೌನ್​​ ಜಾರಿ ಮಾಡಿದ್ದಾರೆ. ಆದರೂ ಕೂಡ ಜನ ಗಂಭೀರತೆಯನ್ನು ಅರಿತುಕೊಳ್ಳುತ್ತಿಲ್ಲ. ಲಾಕ್​ಡೌನ್​​ಗೆ ಸಹಕಾರ ನೀಡುತ್ತಿಲ್ಲ. ಲಾಕ್​ಡೌನ್​​ ಯಾಕೆ ಜಾರಿಯಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳದಿದ್ದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕೊರೊನಾ ಸ್ಥಿತಿಗತಿ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಮುಖ್ಯ ಕಾರ್ಯದರ್ಶಿ ಸಭೆ

ರಾಜ್ಯದಲ್ಲಿ ಸಂದಿಗ್ಧ ಆರ್ಥಿಕ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಬಡ ಜನರಿಗಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ‌ ರೀತಿ ಜನರಿಗೆ ಯಾವ ರೀತಿ ಸಹಾಯ ಮಾಡಬೇಕೆಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಇವೆಲ್ಲವೂ ಮುಖ್ಯಮಂತ್ರಿಗಳ ಗಮನಕ್ಕೆ ಇದೆ ಎಂದು‌ ತಿಳಿಸಿದರು‌.

Last Updated : May 20, 2021, 1:23 PM IST

ABOUT THE AUTHOR

...view details