ಬೆಂಗಳೂರು:ಒಂದು ವಾರದ ಲಾಕ್‌ಡೌನ್ ವೇಳೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸರ್ಕಾರ ಸೂಚನೆ ನೀಡಿದೆ.
ವಿಪತ್ತು ನಿರ್ವಹಣಾ ಕಾಯ್ದೆ, 2005ರಡಿ ಹೊರಡಿಸಲಾದ ಈ ಮಾರ್ಗಸೂಚಿಗಳನ್ನು ಬಿಬಿಎಂಪಿ ಆಯುಕ್ತರು, ಬೆಂಗಳೂರು ಪೊಲೀಸ್ ಆಯುಕ್ತರು, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸಬಾರದು ಎಂದು ನಿರ್ದೇಶನ ನೀಡಲಾಗಿದೆ.
ಲಾಕ್‌ಡೌನ್ ಮಾರ್ಗಸೂಚಿ ಉಲ್ಲಂಘಿಸಿದರೆ ಹುಷಾರ್: ಕಾನೂನು ಕ್ರಮ ಖಚಿತ ಮಾರ್ಗಸೂಚಿಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಬಿಬಿಎಂಪಿ ಆಯುಕ್ತರು, ಆಯಾಯ ಸ್ಥಳೀಯ ಅಧಿಕಾರ ವ್ಯಾಪ್ತಿ ಪ್ರದೇಶಗಳಲ್ಲಿ ಕಾರ್ಯಕಾರಿ ದಂಡಾಧಿಕಾರಿಗಳನ್ನು ಘಟನಾ ಕಮಾಂಡರ್ ಆಗಿ ನಿಯೋಜಿಸಬೇಕು. ಘಟನಾ ಕಮಾಂಡರ್ ತಮ್ಮ ತಮ್ಮ ಅಧಿಕಾರ ವ್ಯಾಪ್ತಿ ಪ್ರದೇಶಗಳಲ್ಲಿ ಮಾರ್ಗಸೂಚಿಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ತಿಳಿಸಲಾಗಿದೆ.
ನಿಯಮ ಉಲ್ಲಂಘಿಸಿದರೆ ದಂಡನೆ:
ಲಾಕ್‌ಡೌನ್ ನಿಯಮವನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್ 51 ರಿಂದ 60ರ ಉಪಬಂಧ, ಜೊತೆಗೆ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.