ಬೆಂಗಳೂರು:ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಆಸ್ಪತ್ರೆಗಳು ಕೋವಿಡ್ ರೋಗಿಗಳಿಂದ ಸಂಪೂರ್ಣವಾಗಿ ಭರ್ತಿ ಆಗಿ ಹೋಗಿದ್ದು, ಅದ್ರಲ್ಲೂ ಸರಕಾರಿ ವೈದ್ಯಕೀಯ ಕಾಲೇಜುಗಳು ಅತಿ ಹೆಚ್ಚಿನ ಕೋವಿಡ್ ರೋಗಿಗಳಿಂದ ತುಂಬಿ ಹೋಗಿತ್ತು. ಇಂತಹ ಪರಿಸ್ಥಿತಿಯಲ್ಲೂ ನಿವಾಸಿ ವೈದ್ಯರು ಆಸ್ಪತ್ರೆಗಳ ಆಧಾರ ಸ್ತಂಭದಂತೆ ನಿಂತು ರಾಜ್ಯದ ಜನರನ್ನು ಹಾಗೂ ರಾಜ್ಯ ಸರಕಾರವನ್ನು ಭೀಕರ ಬಿಕ್ಕಟ್ಟಿನಿಂದ ಪಾರುಮಾಡಲು ಹಗಲಿರುಳು ಶ್ರಮಿಸಿದ್ದವು.
ಅನೇಕ ಸವಾಲು ಹಾಗೂ ಸಮಸ್ಯೆಗಳ ಜೊತೆಗೆ ನಾವೂ ಇದನ್ನು ಸಮರ್ಥವಾಗಿ ಎದುರಿಸಿ ಜನರ ಒಳಿತಿಗಾಗಿ ಸಹಕರಿಸಿದ್ದೇವೆ. ಹೀಗಿರುವಾಗ, ರಾಜ್ಯ ಸರಕಾರದ ಅಧಿಕಾರಿಗಳನ್ನು ಹಾಗೂ ರಾಜ್ಯದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮಂತ್ರಿಗಳನ್ನು ಸಾಕಷ್ಟು ಸಾರಿ ಲಿಖಿತ ಹಾಗೂ ಮೌಖಿಕ ಮನವಿಗಳನ್ನೂ ನೀಡಿದ್ದರೂ ಇನ್ನೂ ನಮ್ಮ ಬೇಡಿಕೆಗಳು ಈಡೇರಿಲ್ಲ ಅಂತ ಕರ್ನಾಟಕ ಅಸೋಸಿಯೇಷನ್ ಆಫ್ ರೆಸಿಡೆನ್ಸಿ ಡಾಕ್ಟರ್ಸ್ ಆಕ್ರೋಶ ಹೊರಹಾಕಿದ್ದಾರೆ.
ಕಳೆದ ಜುಲೈ 19ರಿಂದ ವಿವಿಧ ರೀತಿಯಲ್ಲಿ ಮುಷ್ಕರ ನಡೆಸುತ್ತಿದ್ದು, ಶೈಕ್ಷಣಿಕ ಶುಲ್ಕವನ್ನ ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿದ್ದಾರೆ.
ಶೈಕ್ಷಣಿಕ ಶುಲ್ಕ ಪರಿಷ್ಕರಣೆ ಕುರಿತಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸರಕಾರಿ ಸೀಟು ಪಡೆದವರಿಗೆ ತುಂಬಾ ತಾರತಮ್ಯವಾಗುತ್ತಿದೆ. ರಾಜ್ಯವು ಅತಿ ಹೆಚ್ಚು ಶೈಕ್ಷಣಿಕ ಶುಲ್ಕವನ್ನು ಪಡೆಯುತ್ತಿದೆ. ಹಾಗಾಗಿ ಇಂತಹ ಕೋವಿಡ್ ಪರಿಸ್ಥಿತಿಯಲ್ಲಿ ಹಗಲಿರುಳು ಶ್ರಮಿಸಿದ ನಿವಾಸಿ ವೈದ್ಯರುಗಳ (PG /SS) ಸೇವೆಯನ್ನು ಪರಿಗಣಿಸಿ ಈ ಮೂಲಕ ಶೈಕ್ಷಣಿಕ ಶುಲ್ಕ ಪರಿಷ್ಕರಣೆ ಮಾಡುವಂತೆ ಮನವಿ ಮಾಡಿದ್ದಾರೆ.