ಬೆಂಗಳೂರು ಹಾಸ್ಟೆಲ್ ಶೌಚಾಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಬೆಂಗಳೂರು: ಬನ್ನೇರುಘಟ್ಟ ಎಎಂಸಿ ಕಾಲೇಜಿನ ಹಾಸ್ಟೆಲ್ ಶೌಚಾಲಯದಲ್ಲಿ ಬುಧವಾರ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು - ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಎಸ್ ಪ್ರಥಮ ವರ್ಷಕ್ಕೆ ಡಿಸೆಂಬರ್ 1ರಂದು ದಾಖಲಾಗಿದ್ದ ಕೇರಳ ಮೂಲದ 19 ವರ್ಷದ ನಿತಿನ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಎಎಂಸಿ ಕ್ಯಾಂಪಸ್ ಒಳಗಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ವಾಸವಿದ್ದು, ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದನು. ಬಹಳ ಹೊತ್ತಾದರೂ ಕೊಠಡಿ ತೆರೆಯದ ಕಾರಣ ಸಹಪಾಠಿ ಬಾಗಿಲು ಬಡಿದಿದ್ದಾರೆ. ಆದರೂ ಒಳಗಡೆಯಿಂದ ಪ್ರತಿಕ್ರಿಯೆ ಬಾರದಿದ್ದಾಗ ಹಾಸ್ಟೆಲ್ ವಾರ್ಡನ್ಗೆ ವಿಚಾರ ತಿಳಿಸಿದ್ದಾರೆ.
ಹಾಸ್ಟೆಲ್ ಸಿಬ್ಬಂದಿಗೆ ಶೌಚಾಲಯದ ಬಾಗಿಲು ಮುರಿದಾಗ ವಿದ್ಯಾರ್ಥಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸ್ ಇನ್ಸ್ಪೆಕ್ಟರ್ ಹಾಗು ಡಿವೈಎಸ್ಪಿ ಲಕ್ಷ್ಮಿನಾರಾಯಣ್ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಮೈಸೂರು: ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ