ಕರ್ನಾಟಕ

karnataka

ETV Bharat / state

ಬೆಂಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ - ವಿಲ್ಸನ್ ಗಾರ್ಡನ್

ವೈಯಕ್ತಿಕ ಕಾರಣಗಳಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Student committed suicide
ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

By ETV Bharat Karnataka Team

Published : Jan 1, 2024, 12:23 PM IST

Updated : Jan 1, 2024, 2:05 PM IST

ಬೆಂಗಳೂರು: ಪೋಷಕರು, ಸ್ನೇಹಿತರೊಂದಿಗೆ ಹೊಸ ವರ್ಷದ ಸಂಭ್ರಮದಲ್ಲಿರಬೇಕಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಲ್ಸನ್ ಗಾರ್ಡನ್ ಠಾಣಾ ವ್ಯಾಪ್ತಿಯ ಸುಧಾಮ ನಗರದಲ್ಲಿ ನಡೆದಿದೆ. ವರ್ಷಿಣಿ (21) ಮೃತರು.

ಪೋಷಕರೊಂದಿಗೆ ವಾಸವಿದ್ದ ವರ್ಷಿಣಿ, ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವುದೇ ಡೆತ್​ನೋಟ್ ಲಭ್ಯವಾಗಿಲ್ಲ. ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಹಾದಿ ಹಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಫೋಟೋಗ್ರಫಿಯಲ್ಲಿ ಆಸಕ್ತಿ ಹೊಂದಿದ್ದ ವರ್ಷಿಣಿ ಇಯರ್ ಎಂಡ್ ಸಂಭ್ರಮದ ಪೋಟೋ ತೆಗೆಯಲು ಸಿದ್ದತೆ ನಡೆಸಿದ್ದಳು ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೋಷಕರ ದೂರಿನ ಮೇರೆಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಾಸನ: ಕೆರೆಗೆ ಹಾರಿ ಪತ್ನಿ ಆತ್ಮಹತ್ಯೆ, ರಕ್ಷಿಸಲು ಹೋದ ಪತಿಯೂ ಸಾವು

Last Updated : Jan 1, 2024, 2:05 PM IST

ABOUT THE AUTHOR

...view details