ಬೆಂಗಳೂರು: ನಗರದಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಎಎಸ್ಸಿ ಕಾಲೇಜಿನ ಅಂತಿಮ ವರ್ಷದ ಬಿಬಿಎಂ ವಿದ್ಯಾರ್ಥಿ ಪವನ್(19)ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.
ಕಾಲೇಜು ಮುಗಿಸಿ ಬಂದ ಪವನ್ ಹೆಗ್ಗನಹಳ್ಳಿಯಲ್ಲಿರುವ ತನ್ನ ಮನೆಗೆ ಹೋಗಿದ್ದ. ನಿನ್ನೆ ಸಂಜೆ ಸುಬ್ರಮಣ್ಯನಗರದ ಮಿಲ್ಕ್ ಕಾಲೋನಿ ಮೈದಾನಕ್ಕೆ ಬಂದಿದ್ದು, ಅಲ್ಲಿನ ಕಟ್ಟಡವೊಂದರ ವ್ಯಾಪ್ತಿಯಲ್ಲಿ ಸಾವಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿರುವ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.