ಕರ್ನಾಟಕ

karnataka

ETV Bharat / state

ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಮೇಲ್: ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಪ್ಲಾನ್! - ಪರೀಕ್ಷೆ ಮುಂದೂಡಲು ಬಾಂಬ್​ ಬೆದರಿಕೆ ಮೇಲ್​ ಕಳುಹಿಸಿದ ವಿದ್ಯಾರ್ಥಿ

ತನಿಖೆಯಿಂದ ಎಲ್ಲರೂ ಆಶ್ಚರ್ಯ ಪಡುವ ಸಂಗತಿ ಬಯಲಾಗಿದೆ. ಅದೇ ಸ್ಕೂಲ್ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿದೆ.

ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಮೇಲ್
ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ ಮೇಲ್

By

Published : Jul 19, 2022, 4:22 PM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಡೆತನದ ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಕಳುಹಿಸಿದ್ದ ಕಿಡಿಗೇಡಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ತನಿಖೆಯಿಂದ ಎಲ್ಲರೂ ಆಶ್ಚರ್ಯಪಡುವ ಸಂಗತಿ ಬಯಲಾಗಿದೆ. ಅದೇ ಸ್ಕೂಲ್​​ನ 10ನೇ ತರಗತಿ ವಿದ್ಯಾರ್ಥಿ ಬೆದರಿಕೆ ಮೇಲ್ ಕಳುಹಿಸಿದ್ದ ಎಂಬುದು ಗೊತ್ತಾಗಿದೆ.

ನ್ಯಾಷನಲ್ ಹಿಲ್ ವ್ಯೂ ಪಬ್ಲಿಷ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದು, ಆತನನ್ನು ವಶಕ್ಕೆ ವಿಚಾರಣೆ ನಡೆಸಿ ಪೊಲೀಸರು ಬಾಲಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಜುಲೈ 21 ರಂದು 10 ನೇ ತರಗತಿಯ ಮೊದಲ ಸೆಮಿಸ್ಟರ್ ಪರೀಕ್ಷೆ ಇತ್ತು. ಹೀಗಾಗಿ ಪರೀಕ್ಷೆ ಮುಂದೂಡಲು ವಿದ್ಯಾರ್ಥಿ ಪ್ಲಾನ್​ ಮಾಡಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದಾನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಆರ್.ಆರ್.ನಗರ ಪೊಲೀಸರು ಮೇಲ್ ಬಂದ ಐಪಿ ಅಡ್ರೆಸ್ ಜಾಡು ಹಿಡಿದು ವಿದ್ಯಾರ್ಥಿಯ ಕಿಡಿಗೇಡಿತನವನ್ನು ಪತ್ತೆ ಮಾಡಿದ್ದಾರೆ.

ಆರೋಪಿ ಅಪ್ರಾಪ್ತನಾಗಿರುವ ಕಾರಣ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಹಾಗೂ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ‌ ಲಕ್ಮಣ್ ನಿಂಬರಗಿ ಮಾಹಿತಿ ನೀಡಿದ್ದಾರೆ.

For All Latest Updates

TAGGED:

ABOUT THE AUTHOR

...view details