ಕರ್ನಾಟಕ

karnataka

ETV Bharat / state

ಕಾಲೇಜಿನಲ್ಲಿ ಎಂ ಟೆಕ್​ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ.. ಬೆಚ್ಚಿಬಿದ್ದ ಬೆಂಗಳೂರು - ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿತ - ಸ್ಥಳದಲ್ಲೇ ಸಾವನ್ನಪ್ಪಿದ ಯುವತಿ- ತಾನೂ ಚಾಕು ಇರಿದುಕೊಂಡ ವಿದ್ಯಾರ್ಥಿ

student-stabbed-in-college-bengaluru
ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ.. ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ

By

Published : Jan 2, 2023, 2:53 PM IST

Updated : Jan 2, 2023, 5:53 PM IST

ಕಾಲೇಜಿನಲ್ಲಿ ಎಂ ಟೆಕ್​ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ...

ಬೆಂಗಳೂರು : ಯಲಹಂಕದ ಕಾಲೇಜೊಂದರಲ್ಲಿ ಬೆಚ್ಚಿಬೀಳಿಸುವ ಆತಂಕಕಾರಿ ಘಟನೆಯೊಂದು ಇಂದು ನಡೆದಿದೆ. ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ವಿದ್ಯಾರ್ಥಿನಿಗೆ ಚಾಕು ಇರಿದ ಬಳಿಕ ಯುವಕ ತಾನೂ ಸಹ ಚಾಕುವಿನಿಂದ ಇರಿದುಕೊಂಡಿದ್ದಾನೆ.

ಪ್ರೀತಿ ನಿರಾಕರಿಸಿದ್ದಕ್ಕೆ ಕೋಪ.. ತನ್ನ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಗೆ ಚಾಕುವಿನಿಂದ ಇರಿದಿರುವ ಶಂಕೆ ಇದೆ. ಯುವಕ ನಂತರ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವತಿ ಸಾವನ್ನಪ್ಪಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ.

ಯಲಹಂಕ ತಾಲೂಕಿನ ರಾಜಾನುಕುಂಟೆ ಬಳಿಯ ಪ್ರೆಸಿಡೆನ್ಸಿ ಕಾಲೇಜ್​ನಲ್ಲಿ ಇಂದು ಮಧ್ಯಾಹ್ನ 12:30ರ ಸಮಯದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಕೋಲಾರದ ಮೂಲದ ಎಂ.ಟೆಕ್ ಮೊದಲ ಸೆಮಿಸ್ಟರ್ ವಿದ್ಯಾರ್ಥಿನಿ ಚಾಕು ಇರಿತಕ್ಕೊಳಗಾಗಿ ಸಾವನ್ನಪ್ಪಿದ್ದಾಳೆ. ಚಾಕು ಇರಿತದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾಳೆ. ಯುವತಿಗೆ ಚಾಕು ಇರಿದ ಬಳಿಕ ಪವನ್ ಕಲ್ಯಾಣ್ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರೀತಿ ನಿರಾಕರಿಸಿದ್ದರೂ ಬೆನ್ನ ಹಿಂದೆ ಬಿದ್ದಿದ್ದನಾ ಪವನ್​ ಕಲ್ಯಾಣ್​? ವಿದ್ಯಾರ್ಥಿನಿ ಮತ್ತು ಪವನ್ ಕಲ್ಯಾಣ್ ಕೋಲಾರ ಮೂಲದವರು. ವಿದ್ಯಾರ್ಥಿನಿಯನ್ನು ಪವನ್ ಪ್ರೀತಿ ಮಾಡುತ್ತಿದ್ದ. ಆದರೆ ಆಕೆ ಪವನ್ ಪ್ರೀತಿಗೆ ಒಪ್ಪಿಗೆ ಕೊಟ್ಟಿರಲಿಲ್ಲವಂತೆ. ಪವನ್ ಇಂದು ಕಾಲೇಜ್ ಗೆ ಬಂದು ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಪವನ್ ಕಲ್ಯಾಣ್​ ಬೇರೆ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಆತ ಕಾಲೇಜಿನ ತರಗತಿ ಬಳಿ ಹೇಗೆ ಬಂದ ಎಂಬ ಪ್ರಶ್ನೆ ಕಾಡುತ್ತಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಕ್ರಿಕೆಟ್ ಆಡುತ್ತಿದ್ದವರ ಮೇಲೆ ಲಾಠಿ ಬೀಸಿದ ಪೊಲೀಸರು: 6ನೇ ತರಗತಿ ವಿದ್ಯಾರ್ಥಿ ಗಂಭೀರ

Last Updated : Jan 2, 2023, 5:53 PM IST

ABOUT THE AUTHOR

...view details