ಬೆಂಗಳೂರು:ಸರ್ಕಾರದ ಆದೇಶದಂತೆ 2020-21ರ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಅದರಂತೆ ನಿಗಮದ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಜನವರಿ 31ರವರೆಗೆ ಅವಕಾಶ ಮಾಡಿಕೊಡಲಾಗಿತ್ತು.
ಕಳೆದ ವರ್ಷದ ಬಸ್ ಪಾಸ್ ತೋರಿಸಿ ಶಾಲಾ-ಕಾಲೇಜಿಗೆ ಪ್ರಯಾಣಿಸಿ - ವಿದ್ಯಾರ್ಥಿಗಳ ಬಸ್ ಪಾಸ್
ಎಲ್ಲಾ ವರ್ಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ - ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಶೀದಿ ಜೊತೆಗೆ ಫೆಬ್ರವರಿ 28ರವರೆಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಕ್ರಮ ಕೈಗೊಳ್ಳಲಾಗಿದೆ.
ಇದೀಗ ಪಾಸ್ಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ - ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಶೀದಿ ಜೊತೆಗೆ ನಿಗಮದ ಬಸ್ಸುಗಳಲ್ಲಿ ಸಂಬಂಧಪಟ್ಟ ಮಾರ್ಗದಲ್ಲಿ ಅಥವಾ ಹೊಸ ವಿಳಾಸದಲ್ಲಿರುವ ಶಾಲಾ - ಕಾಲೇಜುಗಳಿಗೆ ತೆರಳಲು ಫೆಬ್ರವರಿ 28ರವರೆಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಕ್ರಮ ಕೈಗೊಳ್ಳಲಾಗಿದೆ.
ಅದರನ್ವಯ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಶಾಲಾ - ಕಾಲೇಜುಗಳಿಗೆ ದಾಖಲಾಗಿರುವ ಪಾವತಿ ರಶೀದಿಯೊಂದಿಗೆ ಹಳೆಯ ಬಸ್ ಪಾಸ್ ತೋರಿಸಿ, ಕೆಎಸ್ಆರ್ಟಿಸಿಯ ನಗರ, ಹೊರವಲಯ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.