ಬೆಂಗಳೂರು: ರಾಯಚೂರಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ ಸಂಬಂಧ ರಾಜ್ಯಾದ್ಯಂತ ಅಕ್ರೋಶ ವ್ಯಕ್ತವಾಗುತ್ತಿದೆ. ಅಪರಾಧಿಗಳಿಗೆ ಶಿಕ್ಷೆ ಆಗಬೇಂದು ಒತ್ತಾಯಿಸಿ ಸೋಶಿಯಲ್ ಮೀಡಿಯಾದಲ್ಲೂ ಕೂಗು ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಿದ್ಯಾರ್ಥಿನಿ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪ್ರತಿಭಟನೆ ನಡೆಸಲಾಯಿತು.
ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣ: ಸಿಬಿಐಗೆ ವಹಿಸುವಂತೆ ಒರಟ ಪ್ರಶಾಂತ್ ಒತ್ತಾಯ - kannada news
ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
![ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣ: ಸಿಬಿಐಗೆ ವಹಿಸುವಂತೆ ಒರಟ ಪ್ರಶಾಂತ್ ಒತ್ತಾಯ](https://etvbharatimages.akamaized.net/etvbharat/images/768-512-3087405-thumbnail-3x2-orta.jpg)
ವಿದ್ಯಾರ್ಥಿನಿ ಸಾವಿನ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಪ್ರತಿಭಟನೆ
ವಿದ್ಯಾರ್ಥಿನಿ ಸಾವಿನ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ನಟ ಒರಟ ಪ್ರಶಾಂತ್ ಭಾಗಿಯಾಗಿ, ವಿದ್ಯಾರ್ಥಿನಿ ಸಾವು ಪ್ರಕರಣ ನಿಜಕ್ಕೂ ಬೇಸರದ ಸಂಗತಿ. ಈ ಕೃತ್ಯ ಎಸಗಿರುವ ವ್ಯಕ್ತಿ ಯಾರೇ ಆಗಿರಲಿ, ಎಷ್ಟೇ ಪ್ರಭಾವಿಯಾಗಿರಲಿ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಆರೋಪಿಗೆ ಕೊಡುವ ಶಿಕ್ಷೆ ಮುಂದಿನ ದಿನಗಳಲ್ಲಿ ಯಾರೂ ಇನ್ನೊಮ್ಮೆ ಈ ರೀತಿಯ ತಪ್ಪು ಮಾಡಬಾರದು ಅಂತಹ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.