ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜನರು ಜಾಗೃತರಾಗಿರಬೇಕು ಎಂದು ನಗರ ಪೊಲೀಸ್ ಆಯುಕ್ತರು ಈ ಹಿಂದೆ ಮುನ್ಸೂಚನೆ ನೀಡಿದ್ರು. ಇದೀಗ ನಗರ ಆಯುಕ್ತರ ಮಾತಿನಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪೇಚೆಗೆ ಸಿಲುಕಿದ್ದಾರೆ.
ಸೈಬರ್ ದಾಳಿಗೆ ವಿದ್ಯಾರ್ಥಿಗಳು ಬಲಿ: ಅಶ್ಲೀಲವಾಗಿ ಎಡಿಟ್ ಮಾಡಿ ಪೋರ್ನ್ ಸೈಟ್‌ಗಳಿಗೆ ಅಪ್ಲೋಡ್ - upload to porn web
ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ತೆಗೆದಿರುವ ಫೋಟೋಗಳನ್ನು ಇನ್ಸ್ಟಾಗ್ರಾಂ, ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿರುವುದನ್ನೇ ಬಂಡವಾಳವಾಗಿಟ್ಟುಕೊಂಡ ಸೈಬರ್ ಖದೀಮರು ಇವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಪೋರ್ನ್ ವೆಬ್ ಸೈಟ್ಗೆ ಅಪ್ಲೋಡ್ ಮಾಡಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಕೆಲವು ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ತೆಗೆದಿರುವ ಫೋಟೋಗಳನ್ನ ಇನ್ಸ್ಟಾಗ್ರಾಂ, ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನೇ ಬಂಡವಾಳವಾಗಿಟ್ಟುಕೊಂಡ ಸೈಬರ್ ಖದೀಮರು ಅಶ್ಲೀಲವಾಗಿ ಎಡಿಟ್ ಮಾಡಿ ಪೋರ್ನ್ ವೆಬ್ ಸೈಟ್‌ಗಳಿಗೆ ಅಪ್ಲೋಡ್ ಮಾಡಿದ್ದಾರೆ.
ತನ್ನ ಸಹಪಾಠಿಯ ಈ ರೀತಿಯ ಫೋಟೋ ನೋಡಿದ ವಿದ್ಯಾರ್ಥಿಯೊಬ್ಬ ಬೆಚ್ಚಿ ಬಿದ್ದಿದ್ದ. ತಕ್ಷಣ ಇತರೆ ಸಹಪಾಠಿಗಳಿಗೆ ಮತ್ತು ತನ್ನ ಕಾಲೇಜು ಆಡಳಿತ ಮಂಡಳಿಯವರಿಗೆ ಈ ವಿಚಾರ ತಿಳಿಸಿದ್ದಾನೆ. ಸದ್ಯ ಈ ಬಗ್ಗೆ ನಗರ ಆಯುಕ್ತರ ಕಚೇರಿಯಲ್ಲಿರುವ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸೈಬರ್ ಖದೀಮರು ಕೊರೊನಾ ಟೈಮ್ನಲ್ಲಿ ಹೆಚ್ಚಾಗಿ ತಮ್ಮ ಕೃತ್ಯವೆಸಗುತ್ತಿದ್ದು, ಇಂಥ ಪ್ರಕರಣಗಳನ್ನು ಬೇಧಿಸುವುದು ಪೊಲೀಸರಿಗೆ ಸವಾಲಾಗುತ್ತಿದೆ.