ಬೆಂಗಳೂರು:ಸರ್ಕಾರದ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿದುಕೊಳ್ಳುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸಲಹೆ ನೀಡಿದರು .
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕೆಆರ್ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂರು ಕೋಟಿ ವೆಚ್ಚದಲ್ಲಿ ಗ್ರಂಥಾಲಯ ಹಾಗೂ ತರಗತಿ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ, ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ 684 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಮೂಲಸೌಲಭ್ಯ ಒದಗಿಸುವುದು ನಮ್ಮ ಆದ್ಯ ಕರ್ತವ್ಯ. ಚಿಕ್ಕಂದಿನಲ್ಲಿ ಓದುವ ವೇಳೆ ಅಗತ್ಯ ಸೌಲಭ್ಯಗಳು ಸಿಗಲು ಪರದಾಡುವಂತಾಗಿತ್ತು. ಅಗತ್ಯಕ್ಕೆ ತಕ್ಕಂತೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ, ಈಗಿನ ಸರ್ಕಾರಗಳು ಬಡ ವಿದ್ಯಾರ್ಥಿಗಳು ಹಿತದೃಷ್ಟಿಯಲ್ಲಿಟ್ಟುಕೊಂಡು ವಿಶೇಷ ಸವಲತ್ತುಗಳನ್ನು ಒದಗಿಸುತ್ತಿವೆ ಎಂದರು.
ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಉಂಟಾಗದಂತೆ ಗೋಡೆಗೆ ಸುಣ್ಣಬಣ್ಣ, ಹೆಚ್ಚುವರಿ ಕೋಣೆಗಳು, ಶೌಚಾಲಯ, ಗ್ರಂಥಾಲಯ, ಕ್ರೀಡಾಂಗಣ ಇನ್ನಿತರ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಇಂದು ಒಟ್ಟು 684 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ ಎಂದು ತಿಳಿಸಿದರು.
ನಂತರ ಪಾಶುಂಪಾಲ ಡಾ.ಚಂದ್ರಶೇಖರ್ ಮಾತನಾಡಿ , ಹಾಲಿ ಸಚಿವರು ಕಳೆದ ಒಂಬತ್ತು ವರ್ಷಗಳಿಂದ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕಾಲೇಜಿನಲ್ಲಿ 2500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸಲಾಗುತ್ತಿದೆ. ಕಾಲೇಜು ಸಭಾಂಗಣ ಅಭಿವೃದ್ಧಿ ಪಡಿಸುವಲ್ಲಿ ಹಿನ್ನಡೆಯಾಗಿದೆ. ಅತಿ ಶೀಘ್ರದಲ್ಲಿ ಅಭಿವೃದ್ಧಿ ಪಡಿಸಿ ಅನುಕೂಲ ಮಾಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.
ಇದೇ ಸಮಯದಲ್ಲಿ ಬಸವನಪುರ ವಾರ್ಡ್ನಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಭೂಮಿ ಪೂಜೆ, ಅರ್ಹ ಪಲಾನುಭವಿಗಳಿಗೆ 30 ಸೈಕಲ್‌ಗಳ ವಿತರಣೆ, ವಿಕಲಚೇತನರಿಗೆ ತ್ರಿಚಕ್ರ ವಾಹನಗಳು, ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿ 2,500 ಹೆಲ್ತ್ ಕಾರ್ಡ್ಗಳನ್ನು ವಿತರಿಸಲಾಯಿತು.