ಕರ್ನಾಟಕ

karnataka

ETV Bharat / state

ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್​ಗೆ​ ಹೃದಯ ಸಮಸ್ಯೆ: ಎರಡು ಸ್ಟಂಟ್ ಅಳವಡಿಕೆ

ಬಹುಕೋಟಿ ವಂಚನೆ ಪ್ರಕರಣ ಪ್ರಮುಖ ಆರೋಪಿ ಮನ್ಸೂರ್​ ಖಾನ್ ​ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದು ಖಾತ್ರಿಯಾಗಿದೆ. ಹೀಗಾಗಿ ಹೃದಯಕ್ಕೆ ಎರಡು ಸ್ಟಂಟ್ ಅಳವಡಿಸಿ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ.

ಐಎಂಎ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್​ ಹೃದಯಕ್ಕೆ ಸ್ಟಂಟ್ ಅಳವಡಿಕೆ

By

Published : Aug 26, 2019, 1:34 PM IST

ಬೆಂಗಳೂರು: ಐಎಂಎ ಮಾಲೀಕ ಹಾಗೂ ಬಹುಕೋಟಿ ವಂಚನೆ ಪ್ರಕರಣ ಪ್ರಮುಖ ಆರೋಪಿ ಮನ್ಸೂರ್​ ಖಾನ್ ​ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದು ಖಾತ್ರಿಯಾಗಿದ್ದು, ಹೃದಯಕ್ಕೆ ಎರಡು ಸ್ಟಂಟ್ ಅಳವಡಿಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ.

ಎಸ್ಐಟಿ ಕಸ್ಟಡಿ ಅವಧಿ ಅಂತ್ಯವಾಗಿರುವ ಹಿನ್ನೆಲೆ ನ್ಯಾಯಾಲಯ ಮನ್ಸೂರನನ್ನ ಪರಪ್ಪನ ಅಗ್ರಹಾರ ಜೈಲಿನ ಕಸ್ಟಡಿಗೆ ನೀಡಿತ್ತು. ಆದರೆ, ಪರಪ್ಪನ ಅಗ್ರಹಾರ ಜೈಲಿಗೆ ಹೋದ‌ ಮನ್ಸೂರ್​ಗೆ ಹೃದಯ ಸಂಬಂಧಿ ಕಾಯಿಲೆ ಉಲ್ಬಣಗೊಂಡ ಹಿನ್ನೆಲೆ ಜೈಲಾಧಿಕಾರಿಗಳು ಆತನನ್ನ ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.

ಸದ್ಯ ಮನ್ಸೂರ್​ ಹೃದಯಕ್ಕೆ ಎರಡು ಸ್ಟಂಟ್ ಅಳವಡಿಸಲಾಗಿದೆ. ಅನಂತರ ಆತನನ್ನು ಪರಪ್ಪನ ಅಗ್ರಹಾರದಲ್ಲಿರುವ ಜೈಲಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ‌‌ ಮನ್ಸೂರ್​ಗೆ ಜೈಲಾಧಿಕಾರಿಗಳು ಆರೈಕೆ ಮಾಡುವುದರ ಜೊತೆಗೆ ಆತನ ಮೇಲೆ ಒಂದು ಕಣ್ಣಿಟ್ಟಿದ್ದಾರೆ. ಮತ್ತೊಂದೆಡೆ ಐಎಂಎ ವಂಚನೆ ಬಗ್ಗೆ ಪ್ರಾಥಮಿಕ ಮಾಹಿತಿ ಕಲೆ ಹಾಕಿರುವ ಸಿಬಿಐ‌ ಅಧಿಕಾರಿಗಳು, ಸದ್ಯದಲ್ಲೇ ಮನ್ಸೂರ್​ನನ್ನ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details