ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯ ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಮೂರು ತಿಂಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವಂತೆ ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
3 ತಿಂಗಳ ಒಳಗಾಗಿ ಎಲ್ಲ ವ್ಯವಸ್ಥೆ ಸರಿಗೊಳಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಹಲವು ಜಿಲ್ಲಾ ನೋಂದಣಾಧಿಕಾರಿಗಳ ಕಛೇರಿ ಮತ್ತು ಉಪನೋಂದಣಿ ಕಛೇರಿಗೆ ಆಗಮಿಸುವ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ನೋಂದಣಾಧಿಕಾರಿಗಳ ಕಛೇರಿ ಮತ್ತು ಉಪನೋಂದಣಿ ಕಛೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಲು ಕ್ರಮಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.
ಏನೆಲ್ಲಾ ಕೊರತೆಗಳು ಪತ್ತೆ?:ಶೌಚಾಲಯ ಕೊರತೆಗಳಿರುವ ರಿಜಿಸ್ಟರ್ ಕಚೇರಿಗಳ ಸಂಖ್ಯೆ 36 ಪತ್ತೆಯಾಗಿದೆ. ಕುಡಿಯುವ ನೀರಿನ ವ್ಯವಸ್ಥೆ ಕೊರತೆ ಇರುವ ಕಚೇರಿಗಳ ಸಂಖ್ಯೆ 28 ಇದೆ. ಲಿಫ್ಟ್ ಕೊರತೆ ಇರುವ ಕಚೇರಿಗಳ ಸಂಖ್ಯೆ 202 ಇವೆ. ಇನ್ನು 135 ಕಚೇರಿಗಳಲ್ಲಿ ರ್ಯಾಂಪ್ಗಳ ಕೊರತೆ ಇವೆ.