ಕರ್ನಾಟಕ

karnataka

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಜ್ಞರ ನೇಮಕ; ಜೂನ್‌ 30ರೊಳಗೆ ವರದಿ ಸಲ್ಲಿಕೆ

By

Published : Jun 19, 2021, 4:47 PM IST

Updated : Jun 19, 2021, 5:42 PM IST

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದ್ದು, ಈ ಎಲ್ಲ ಸಮಿತಿಗಳು ಜೂನ್‌ 30ರೊಳಗೆ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

dcm
dcm

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ - ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥ ನಾರಾಯಣ ತಿಳಿಸಿದರು. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಎಲ್ಲ ಸಮಿತಿಗಳು ಜೂನ್‌ 30ರೊಳಗೆ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ.

ವಿಷಯವಾರು ತಜ್ಞರ ಸಮಿತಿಯ ಮುಖ್ಯಸ್ಥರ ವಿವರ:

ಸಾಮಾಜಿಕ ವಿಜ್ಞಾನ:

ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೈ.ಎಸ್. ಸಿದ್ದೇಗೌಡ (ಅಧ್ಯಕ್ಷರು), ಪ್ರೊ. ಬಿ.ಪಿ. ವೀರಭದ್ರಪ್ಪ, ಪ್ರೊ. ಬಿ.ಕೆ. ತುಳಸೀಮಾಲಾ, ಪ್ರೊ.ಎನ್.ಆರ್. ಭಾನುಮೂರ್ತಿ, ಪ್ರೊ.ಹರೀಶ್‌ ರಾಮಸ್ವಾಮಿ, ಪ್ರೊ.ಜಿ. ಸರ್ವಮಂಗಳ, ಪ್ರೊ.ವಿ.ಎ. ಅಮಿನಾಭಾವಿ, ಪ್ರೊ.ಎ. ರಾಮೇಗೌಡ, ಪ್ರೊ. ಸಂಗೀತಾ ಮನೆ, ಪ್ರೊ. ಎನ್.ನರಸಿಂಹಮೂರ್ತಿ, ಪ್ರೊ. ನಿರಂಜನ, ಪ್ರೊ. ಆರ್.‌ಆನ್.‌ ಮನಗೊಳಿ, ಪ್ರೊ. ಗೋಪಾಲಕೃಷ್ಣ ಜೋಶಿ ಸದಸ್ಯರು.

ಭಾಷೆ ಮತ್ತು ಭಾಷಾಶಾಸ್ತ್ರ:

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ. ನಾಯಕ್‌ (ಅಧ್ಯಕ್ಷರು), ಪ್ರೊ.ಎಸ್.ಸಿ.ರಮೇಶ್‌, ಪ್ರೊ.ಕೆ.ಇ. ದೇವನಾಥನ್‌, ಪ್ರೊ. ಲಿಂಗರಾಜ ಗಾಂಧಿ, ಪ್ರೊ. ರಚೇಲ್‌ ಕುರಿಯನ್‌, ಪ್ರೊ. ಗಂಗಾಧರಯ್ಯ, ಪ್ರೊ. ಗೋಪಾಲಕೃಷ್ಣ ಜೋಶಿ ಸದಸ್ಯರು.

ಲಲಿತ ಕಲೆ ಮತ್ತು ದೃಶ್ಯ ಮಾಧ್ಯಮ:

ಸಂಗೀತ ಮತ್ತು ಕಲಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ್‌ ವಿ. ಬೆಟ್ಟಕೋಟೆ (ಅಧ್ಯಕ್ಷರು), ಪ್ರೊ.ಜಯಕುಮಾರ್‌ ರೆಡ್ಡಿ, ಪ್ರೊ.ಎಸ್.‌ಎನ್. ಸುಶೀಲ, ಪ್ರೊ.ಕೆ.ರಾಮಕೃಷ್ಣಯ್ಯ, ಪ್ರೊ.ಗೋಪಾಲಕೃಷ್ಣ ಜೋಶಿ ಸದಸ್ಯರು.

ವಿಜ್ಞಾನ ಮತ್ತು ಗಣಿತ ಶಾಸ್ತ್ರ:

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ ಕುಮಾರ್‌ (ಅಧ್ಯಕ್ಷರು), ಪ್ರೊ.ಟಿ.ಡಿ.ಕೆಂಪರಾಜು, ಪ್ರೊ.ಎಸ್.‌ವಿ.ಹಲಸೆ, ಪ್ರೊ.ಸಿದ್ದು ಪಿ.ಹಲಗೂರು, ಪ್ರೊ.ಎಸ್.ಎಂ.ಶಿವಪ್ರಸಾದ್‌, ಪ್ರೊ.ಶ್ರೀಧರ್‌, ಪ್ರೊ.ಮಂಜುನಾಥ ಪಟ್ಟಾಭಿ, ಪ್ರೊ.ಯು.ಎಸ್. ಮಹಾಬಲೇಶ್ವರ್‌, ಪ್ರೊ.ಪಿ.ಎಂ.ಪಾಟೀಲ್‌, ಪ್ರೊ.ಪರಮೇಶ್ವರ್‌ ವಿ.ಪಂಡಿತ್‌, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು)

ರಾಸಾಯನಿಕ ಮತ್ತು ಜೀವವಿಜ್ಞಾನ ಶಾಸ್ತ್ರ:

ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ (ಅಧ್ಯಕ್ಷರು), ಪ್ರೊ.ಎಲ್.ಗೋಮತಿ ದೇವಿ, ಪ್ರೊ.ದಯಾನಂದ ಅಗಸರ್‌, ಪ್ರೊ.ಜಿ.ಆರ್.‌ನಾಯಕ್‌, ಪ್ರೊ.ವಿ.ಆರ್.ದೇವರಾಜ್‌, ಪ್ರೊ.ಬಾಲಕೃಷ್ಣ ಕಲ್ಲೂರಾಯ, ಪ್ರೊ.ಎಚ್.ಎಸ್.ಭೋಜನಾಯಕ್‌, ಪ್ರೊ.ಲಕ್ಷ್ಮೀ ಇನಾಂದಾರ್‌, ಪ್ರೊ.ವಿ.ಕೃಷ್ಣ, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು)

ಭೂ ವಿಜ್ಞಾನ:

ಕೆಬಿಎನ್‌ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಂ.ಪಠಾಣ್‌ (ಅಧ್ಯಕ್ಷರು), ಪ್ರೊ.ಅಶೋಕ್‌ ಅಂಜಗಿ, ಪ್ರೊ.ಪಿ.ಮಾದೇಶ್‌, ಪ್ರೊ.ಆಸ್ಪ್ಯಾಕ್‌ ಅಹಮದ್‌, ಪ್ರೊ.ಎಸ್.‌ವಿ.ಕೃಷ್ಣಮೂರ್ತಿ, ಪ್ರೊ.ಎನ್.‌ನಂದಿನಿ, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು)

ವಾಣಿಜ್ಯ ಮತ್ತು ನಿರ್ವಹಣೆ:

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿಎಸ್.‌ಯಡಪಡಿತ್ತಾಯ (ಅಧ್ಯಕ್ಷರು), ಪ್ರೊ.ಎಂ.ರಾಮಚಂದ್ರಗೌಡ, ಪ್ರೊ.ಆರ್‌.ಎಲ್.ಹೈದರಾಬಾದ್‌, ಪ್ರೊ.ಎಚ್.‌ಎಸ್.‌ಅನಿತಾ, ಪ್ರೊ..ಡಿ.ಆನಂದ್‌, ಪ್ರೊ.ವಿಜಯ್‌ ಬೂತಪುರ್‌, ಪ್ರೊ.ಸಿಂಥಿಯಾ ಮೆನೇಜಸ್‌, ಪ್ರೊ.ಮುಸ್ತೈರಿ ಬೇಗಂ, ಪ್ರೊ.ಸುದರ್ಶನ್‌ ರೆಡ್ಡಿ, ಡಾ.ಅಲೋಯಿಸಿಸ್‌ ಎಡ್ವರ್ಡ್‌, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು).

ಎಂಜಿನಿಯರಿಂಗ್:‌

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕರಿಸಿದ್ದಪ್ಪ (ಅಧ್ಯಕ್ಷರು), ಪ್ರೊ.‌ಕೆ.ಆರ್.ವೇಣುಗೋಪಾಲ್‌, ಪ್ರೊ.ಕೆ.ಎನ್.ಬಿ.ಮೂರ್ತಿ, ಪ್ರೊ.ಎಸ್.ವಿದ್ಯಾಶಂಕರ್‌, ಪ್ರೊ.ಪುಟ್ಟರಾಜು, ಪ್ರೊ.ಶ್ರೀನಿವಾಸ ಬಲ್ಲಿ, ಪ್ರೊ.ಗೋಪಾಲಕೃಷ್ಣ ಜೋಶಿ (ಸದಸ್ಯರು).

ಪ್ರೊ.ಗೋಪಾಲಕೃಷ್ಣ ಜೋಶಿ ಅವರು ಎಲ್ಲ ವಿಷಯ ಸಮಿತಿಗಳಿಗೆ ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ‌.

Last Updated : Jun 19, 2021, 5:42 PM IST

ABOUT THE AUTHOR

...view details