ಕರ್ನಾಟಕ

karnataka

ETV Bharat / state

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ..ನಾಳೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟನ್ನು ಅಧಿಕಾರಿಗಳು ನಾಳೆ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

Submission of charge sheet to court on acid attack on a young woman case
ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ

By

Published : Aug 9, 2022, 12:34 PM IST

Updated : Aug 9, 2022, 12:48 PM IST

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಂಗಳೂರು ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣದ ಚಾರ್ಜ್ ಶೀಟನ್ನು ಅಧಿಕಾರಿಗಳು ನಾಳೆ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಮೂರು ತಿಂಗಳ ಸುದೀರ್ಘ ತನಿಖೆಯ ಬಳಿಕ ಪೊಲೀಸರು 13ನೇ ಎಸಿಎಂಎಂ ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. 770 ಪುಟಗಳ ಪ್ರಾಥಮಿಕ ಚಾರ್ಜ್ ಶೀಟ್ ಇದಾಗಿದ್ದು, 92 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ.

ಹಾಗೆಯೇ ಇಬ್ಬರು ಐ ವಿಟ್ನೆಸ್​​ಗಳ 164 ಹೇಳಿಕೆಗಳನ್ನೂ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಆ್ಯಸಿಡ್​ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿದ ಮೇಲೆ ತನ್ನ ಸಹೋದರನಿಗೆ ಕರೆ ಮಾಡಿದ್ದ ಆಡಿಯೋ ಸೇರಿ ಹಲವು ವಾಯ್ಸ್ ರೆಕಾರ್ಡ್​ಗಳನ್ನು ಎಫ್​​ಎಸ್​ಎಲ್​ಗೆ ರವಾನೆ ಮಾಡಲಾಗಿತ್ತು.

ಈಗ ಅದು ಆರೋಪಿ ನಾಗೇಶನ ಧ್ವನಿ ಎಂಬುದು ಖಚಿತವಾಗಿದೆ. ಈ ಹಿಂದೆ ನಾಗೇಶ್ ಹಾಗೂ ಸಂತ್ರಸ್ತೆಯ ಹೇಳಿಕೆಯಲ್ಲಿ ನೀಡಿರುವ ಅಂಶಗಳು ಚಾರ್ಜ್ ಶೀಟ್​ನಲ್ಲಿ ಉಲ್ಲೇಖವಾಗಿವೆ. ಸಾಕಷ್ಟು ಸಿಸಿಟಿವಿಗಳ ಸಾಕ್ಷಿಗಳನ್ನು ಸಹ ನಾಳೆ ಕೋರ್ಟ್​ಗೆ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ:ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ

Last Updated : Aug 9, 2022, 12:48 PM IST

ABOUT THE AUTHOR

...view details