ಕರ್ನಾಟಕ

karnataka

ETV Bharat / state

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ: ಟಾಸ್ಕ್ ಫೋರ್ಸ್ ಸಮಿತಿಯಿಂದ ಸಿಎಂಗೆ ವರದಿ ಸಲ್ಲಿಕೆ

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ ರಚಿಸಲಾದ ಟಾಸ್ಕ್ ಪೋರ್ಸ್ ಸಮಿತಿಯು ಸಿಎಂ ಯಡಿಯೂರಪ್ಪಗೆ ವರದಿ ಸಲ್ಲಿಸಿದೆ. ಸಮಿತಿಯ ಶಿಫಾರಸುಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಸಚಿವರಾದ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಎಸ್. ಸುರೇಶ್ ಕುಮಾರ್ ಅವರಿಗೆ ಸೂಚಿಸಲಾಗಿದೆ.

Committee Report
ಟಾಸ್ಕ್ ಫೋರ್ಸ್ ಸಮಿತಿ ವರದಿ ಸಲ್ಲಿಕೆ

By

Published : Nov 30, 2020, 5:32 PM IST

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅಧ್ಯಕ್ಷತೆಯಲ್ಲಿ ರಚಿಸಲಾದ ಟಾಸ್ಕ್ ಪೋರ್ಸ್ ಸಮಿತಿಯು ಸಿಎಂ ಯಡಿಯೂರಪ್ಪಗೆ ವರದಿ ಸಲ್ಲಿಸಿದೆ.

ಈ ಸಮಿತಿಯ ಶಿಫಾರಸುಗಳನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಸಿಎಂ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಮಾತನಾಡಿದ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ ರಚನಾ ಸಮಿತಿಯ ಸದಸ್ಯರಾದ ಪ್ರೊ. ಎಂ.ಕೆ. ಶ್ರೀಧರ್, 175 ವರ್ಷಗಳ ನಂತರ ಭಾರತ ಸರ್ಕಾರವು ತನ್ನದೇ ಆದ ಶಿಕ್ಷಣ ನೀತಿಯನ್ನು ರೂಪಿಸಿದೆ. ಈ ನೀತಿ ನಿರೂಪಣೆಯಲ್ಲಿ ಕರ್ನಾಟಕ ರಾಜ್ಯ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣ ವ್ಯವಸ್ಥೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕೆನ್ನುವುದು ಶಿಕ್ಷಣ ನೀತಿಯ ಆಶಯ ಎಂದರು.

ಸಭೆ ನಂತರ ಮಾತನಾಡಿದ ಡಿಸಿಎಂ ಡಾ. ಅಶ್ವತ್ಥ ನಾರಾಯಣ, ರಾಜ್ಯ ಸರ್ಕಾರ 2020-21ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಮಾಡಲು ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡಿದೆ. ಎಂಟು ತಿಂಗಳ ಹಿಂದೆಯೇ ಕಾರ್ಯಪಡೆ ರಚಿಸಿ ಅದರ ಮೂಲಕ ಶಿಕ್ಷಣ ನೀತಿ ಅನುಷ್ಠಾನಕ್ಕೆ ಯೋಜನೆಯನ್ನು ರೂಪಿಸಿದ್ದು, ಅದರ ವರದಿಯನ್ನು ಇಂದು ಸಲ್ಲಿಕೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲು ಯೋಜನೆಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಸಂಪುಟದ ಅನುಮತಿ ಪಡೆದು ನಂತರ ಕಾರ್ಯರೂಪಕ್ಕೆ ತರಲು ಸಮಿತಿ ರಚಿಸಲಾಗುತ್ತದೆ. ಮುಂದಿನ ಕ್ಯಾಬಿನೆಟ್​​ ಸಭೆಯಲ್ಲಿ ಈ ವರದಿಯನ್ನು ಮಂಡಿಸಲಿದ್ದೇವೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರಲು ನಮ್ಮ ಸರ್ಕಾರ ವೇಗವಾಗಿ ಕೆಲಸ ಮಾಡುತ್ತಿದೆ. ಕರ್ನಾಟಕವು ಶಿಕ್ಷಣ ನೀತಿ ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಬೇಕು ಎಂದರು.

  • ಟಾಸ್ಕ್ ಫೋರ್ಸ್ ಶಿಫಾರಸುಗಳು:

    · ಕೆಎಸ್‍ಎಸ್‍ಇ, ಎಸ್‍ಎಸ್‍ಎಸ್‍ಎಗಳು ಶಾಲೆಗಳ ನಿಯಂತ್ರಣ ಮತ್ತು ಕಾರ್ಯಾಚರಣೆಗಳ ಪ್ರತ್ಯೇಕತೆ ಖಾತರಿಪಡಿಸಿಕೊಳ್ಳುವುದು

    · ಡಿಎಸ್‍ಇಆರ್​ಟಿ ಪುನರ್ ರಚನೆ

    · ಲಿಂಗಾಧಾರಿತ ಒಳಗೊಳ್ಳುವಿಕೆ ಮತ್ತು ದಿವ್ಯಾಂಗ ನಿಧಿಗಾಗಿ ಸಿಎಸ್‍ಆರ್ ಅಡಿಯಲ್ಲಿ ಹಣ ಆಕರ್ಷಿಸುವುದು.

    · ಸಾಕಷ್ಟು ಸಂಖ್ಯೆಯ ವಿಶೇಷ ಶೈಕ್ಷಣಿಕ ವಲಯಗಳ ಸ್ಥಾಪನೆ

    · ಎಲ್ಲಾ ರೀತಿಯ ವಿದ್ಯಾರ್ಥಿ ವೇತನಗಳಿಗೆ ಏಕ ವೇದಿಕೆಯನ್ನು ರೂಪಿಸುವುದು, ದಿವ್ಯಾಂಗರಿಗೆ ವಿದ್ಯಾರ್ಥಿ ವೇತನ ನೀಡುವಂತೆ ಮಾಡುವುದು

    · ಹೊಸ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ಕೆಎಸ್‍ಯು) ಕಾಯ್ದೆಯನ್ನು ಜಾರಿಗೆ ತರುವುದು

    · ಮತ್ತೊಂದು ಹೊಸ ಕಾಯ್ದೆಯನ್ನು ಜಾರಿಗೆ ತಂದು, ಕರ್ನಾಟಕ ಉನ್ನತ ಶಿಕ್ಷಣ ಆಯೋಗವನ್ನು (ಕೆಹೆಚ್‍ಇಸಿ) ಸ್ಥಾಪಿಸಬೇಕು

    · ವಿಶೇಷ ಶೈಕ್ಷಣಿಕ ವಲಯಗಳನ್ನು ಗುರುತಿಸಿ ಸ್ಥಾಪಿಸಬೇಕು.

    · ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಗುಂಪುಗಳಿಗೆ (ಇಎಸ್‍ಡಿಜಿ) ಅನ್ವಯವಾಗುವ ಎಲ್ಲಾ ವಿದ್ಯಾರ್ಥಿ ವೇತನಗಳನ್ನು ಒಂದೇ ವೇದಿಕೆಯಲ್ಲಿ ತರಲಾಗುವುದು.

    · ಅಂಗ ಸಂಸ್ಥೆಗಳು ಮತ್ತು ಸ್ವಾಯತ್ತ ಕಲೇಜುಗಳ ಶ್ರೇಣೀಕೃತ ಸಬಲೀಕರಣ ಪ್ರಕ್ರಿಯೆಗೆ ಚಾಲನೆ ನೀಡುವುದು.

ABOUT THE AUTHOR

...view details