ಬೆಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಮೈಸೂರು, ಕಲಬುರಗಿ ಸೇರಿದಂತೆ ರಾಜ್ಯದ ನಾಲ್ಕು ಮಹಾನಗರ ಪಾಲಿಕೆಗಳನ್ನು ಪರಿಗಣಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೇಂದ್ರದ ಅನುಮೋದನೆಗೆ ನೀರಿಕ್ಷಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.
ಇಂದು ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಲ್. ನಾಗೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು ಮತ್ತು ಬೆಂಗಳೂರು ನಗರ ಸೇರಿ ಒಟ್ಟು ಏಳು ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಆಯ್ಕೆ ಮಾಡಿದೆ. ಈ ಯೋಜನೆಗೆ ಮೈಸೂರು ಒಳಗೊಂಡಿಲ್ಲ. ಆದರೆ, ಮೈಸೂರು, ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.