ಬೆಂಗಳೂರು: ಹೆರಿಟೇಜ್ ಟೂರಿಸಂ, ಹೆಲ್ತ್ ಟೂರಿಸಂ ಹಾಗೂ ಎಜುಕೇಷನ್ ಟೂರಿಸಂ ಸೇರಿದಂತೆ ಪ್ರವಾಸೋದ್ಯಮ ಕ್ಷೇತ್ರವನ್ನು ಇನ್ನಷ್ಟು ಉತ್ತಮಪಡಿಸಲು ಈ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುವ ಉದ್ದಿಮೆದಾರರಿಗೆ ಸಹಾಯಧನ ಮತ್ತು ರಿಯಾಯ್ತಿ ನೀಡುವ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಇಂದು ಶಾಸಕ ಎಸ್.ಎ.ರಾಮದಾಸ್ ಅವರ ಪರವಾಗಿ ಬಿ.ಸಿ.ನಾಗೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿಗೆ ಅವಶ್ಯಕವಿರುವ ತೆರಿಗೆ ವಿನಾಯ್ತಿ, ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಬಂದರೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದರು.