ಕಿಚ್ಚ ಸುದೀಪ್ ತಮ್ಮ ಪತ್ನಿ ಪ್ರಿಯಾ ಜೊತೆ ಮತಕೇಂದ್ರಕ್ಕೆ ತೆರಳಿ ಮತ ಚಲಾಯಿಸದರು. ಯಾರಿಗೆ ಎಷ್ಟೇ ಕೆಲಸವಿದ್ದರೂ ಸ್ವಲ್ಪ ಬಿಡುವು ಮಾಡಿಕೊಂಡು ಬಂದು ಮತ ಚಲಾಯಿಸಿ. ನಮಗೆ ಸಿಕ್ಕಿರುವ ಈ ಅವಕಾಶವನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿದರು.
ಲವ್ಲಿ ಸ್ಟಾರ್ ಪ್ರೇಮ್ ತಮ್ಮ ಪತ್ನಿ ಜ್ಯೋತಿಯೊಂದಿಗೆ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದ್ದಾರೆ. ಇಂದು ಪ್ರೇಮ್ ಅವರ ಹುಟ್ಟುಹಬ್ಬ ಕೂಡಾ. ಮತ ಚಲಾಯಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರೇಮ್, ಇದು ಪ್ರಜಾಪ್ರಭುತ್ವ, ಸೂಕ್ತ ಅಭ್ಯರ್ಥಿಗೆ ಮತ ಚಲಾಯಿಸುವ ಹಕ್ಕು ನಮಗಿದೆ. ಆದ್ದರಿಂದ ಎಲ್ಲರೂ ತಪ್ಪದೆ ಬಂದು ತಮಗೆ ಸರಿ ಎನಿಸಿದ ಅಭ್ಯರ್ಥಿಗೆ ಮತ ಚಲಾಯಿಸಿ ಎಂದರು.