ಬೆಂಗಳೂರು:ರಾಜ್ಯದ224 ಶಾಸಕರು ಏಕ ಪತ್ನಿವ್ರತಸ್ಥರಾ? ಎಂಬ ಹೇಳಿಕೆ ವಿಚಾರವಾಗಿ ಆರೋಗ್ಯ ಸಚಿವ ಸುಧಾಕರ್ ವಿರುದ್ಧ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮೂಲಕ ಕಿಡಿಕಾರಿರುವ ಅವರು, ಆರೋಗ್ಯ ಸಚಿವರ ಹೇಳಿಕೆ ಅತ್ಯಂತ ಖಂಡನೀಯ. ಸಚಿವರಾಗಿದ್ದುಕೊಂಡು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಸಿಡಿ ಪ್ರಸಾರವಾಗಬಾರದು ಎಂದು ಕೋರ್ಟ್ನಿಂದ ತಡೆಯಾಜ್ಞೆ ತಂದಿರೋ ಸುಧಾಕರ್‌ಗೆ ತಮ್ಮ ಚಾರಿತ್ರ್ಯದ ಬಗ್ಗೆಯೇ ಅನುಮಾನವಿದ್ದಂತಿದೆ ಎಂದಿದ್ದಾರೆ.
ಇಂಥ ಬೇಜವಾಬ್ದಾರಿ ಹೇಳಿಕೆ ನೀಡೋ ಸಚಿವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಯಾವುದೇ ಕಾರಣಕ್ಕೂ ತಮ್ಮ ಸಂಪುಟದಲ್ಲಿ ಇಟ್ಟುಕೊಳ್ಳಬಾರದು. ಕೂಡಲೇ ಅವರಿಂದ ರಾಜೀನಾಮೆ ಪಡೆದುಕೊಳ್ಳಬೇಕು. ಜನಪ್ರತಿನಿಧಿಗಳನ್ನು ಪರೋಕ್ಷವಾಗಿ ವ್ಯಭಿಚಾರಿಗಳು ಎಂದು ಕರೆದಿರೋ ಸುಧಾಕರ್ ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯುವ ಹಕ್ಕಿಲ್ಲ ಎಂದು ಹೇಳಿದ್ದಾರೆ.