ಕರ್ನಾಟಕ

karnataka

ETV Bharat / state

ರಾಜೀವ್ ಗಾಂಧಿ ಆರೋಗ್ಯ ವಿವಿ ಡಿಸೆಂಬರ್​ 1ರಿಂದ ಪುನಾರಂಭ: ಸಚಿವ ಸುಧಾಕರ್​​

ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ - ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್​ ಮಾಡಿದ್ದಾರೆ.

By

Published : Nov 13, 2020, 6:02 PM IST

sudhakar
ಡಾ. ಸುಧಾಕರ್

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಎಲ್ಲಾ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ - ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದಿದ್ದಾರೆ.

ABOUT THE AUTHOR

...view details