ಬೆಂಗಳೂರು: ಕಬ್ಬು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸಿಎಂ ಮನೆವರೆಗೆ ಮೆರವಣಿಗೆಯ ಮೂಲಕ ತೆರಳಿ, ಮುತ್ತಿಗೆ ಹಾಕಲು ರೈತರು ಮುಂದಾಗಿದ್ದರು. ಈ ಹಿನ್ನೆಲೆ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ಸಾವಿರಾರು ರೈತರು ಜಮಾಯಿಸಿದ್ದರು.
ಕಬ್ಬು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ: ಸಿಎಂ ಮನೆಗೆ ಮುತ್ತಿಗೆ ಯತ್ನ - ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತರು
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಬ್ಬುಬೆಳೆಗಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಎಂ ಮನೆಗೆ ಮುತ್ತಿಗೆ ಯತ್ನ
ಪ್ರತಿಭಟನೆಗೆ ಅವಕಾಶವಿಲ್ಲದ ಹಿನ್ನೆಲೆ ಪ್ರತಿಭಟನಾನಿರತ ರೈತರನ್ನ ಪೊಲೀಸರು ವಶಕ್ಕೆ ಪಡೆದರು. ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸುವಂತೆ ಸೂಚಿಸಿದ್ದಾರೆ. ರಾಮನಗರ, ಮಂಡ್ಯ, ಮೈಸೂರು, ಉತ್ತರ ಕರ್ನಾಟಕದ ಜಿಲ್ಲೆಯಿಂದ ನೂರಾರು ರೈತರು ಪ್ರತಿಭಟನೆಗೆ ಆಗಮಿಸಿದ್ದರು.
ಇದನ್ನೂ ಓದಿ:ನಾಳೆ ಚಾಮರಾಜಪೇಟೆ ಬಂದ್, ಹೆಚ್ಚುವರಿ ಪೊಲೀಸರ ನಿಯೋಜನೆ: ಆರಗ ಜ್ಞಾನೇಂದ್ರ
TAGGED:
ವಿವಿಧ ಜಿಲ್ಲೆಗಳಿಂದ ರೈತರ ಆಗಮನ