ಕರ್ನಾಟಕ

karnataka

ETV Bharat / state

ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಕೇಸ್.. ಸಬ್​ಇನ್ಸ್​ಪೆಕ್ಟರ್ ಸಸ್ಪೆಂಡ್ - ಪೊಲೀಸ್ ಆಯುಕ್ತ ಕಮಲ್ ಪಂತ್

ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹನುಮಂತನಗರ ಪೊಲೀಸ್ ಠಾಣೆಯ ಸಬ್​​ಇನ್‌ಸ್ಪೆಕ್ಟರ್ ಮಂಜುನಾಥ್​ನನ್ನು ಅಮಾನತು ಮಾಡಿ‌ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

ಕಮಲ್ ಪಂತ್
ಕಮಲ್ ಪಂತ್

By

Published : Feb 27, 2021, 4:06 PM IST

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಆತ್ಮಹತ್ಯೆ ಪ್ರಕರಣ ಸಂಬಂಧ ಹನುಮಂತನಗರ ಪೊಲೀಸ್ ಠಾಣೆಯ ಸಬ್​​ಇನ್‌ಸ್ಪೆಕ್ಟರ್ ಮಂಜುನಾಥ್​ನನ್ನು ಅಮಾನತು ಮಾಡಿ‌ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

ಘಟನೆ ಸಂದರ್ಭದಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಜೊತೆಗಿದ್ದರು. ಆದರೂ ಇಂತಹ ಘಟನೆ ನಡೆದಿದೆ. ಪ್ರಕರಣದಲ್ಲಿ‌ ಮೆಲ್ನೋಟಕ್ಕೆ ಪೊಲೀಸರ ವೈಫಲ್ಯ ಕಂಡು‌ ಬಂದಿದೆ. ಸಬ್​​ಇನ್‌ಸ್ಪೆಕ್ಟರ್ ಮಂಜುನಾಥ್​​ನನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದೆ. ಸದ್ಯಕ್ಕೆ ಇಲಾಖಾ ಮಟ್ಟದಲ್ಲಿ ತನಿಖೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ನ್ಯಾಯಾಂಗ ತನಿಖೆಯಾಗಲಿದೆ. ಇವರು ನೀಡುವ ವರದಿ ಆಧರಿಸಿ‌ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಮಲ್ ಪಂತ್ ತಿಳಿಸಿದ್ದಾರೆ.

ವಂಚನೆ ಪ್ರಕರಣದಲ್ಲಿ ಸಿದ್ದಲಿಂಗಸ್ವಾಮಿ ಎಂಬಾತನನ್ನು ಹನುಮಂತನಗರ ಪೊಲೀಸರು ಬಂಧಿಸಿದ್ದರು. ನಿನ್ನೆ ಮಧ್ಯಾಹ್ನ ಮಹಜರಿಗೆ ಕರೆದುಕೊಂಡು ಬಂದಾಗ ಮನೆಯ ಕಿಚನ್ ಮೂಲಕ ತೆರಳಿ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ABOUT THE AUTHOR

...view details