ಬೆಂಗಳೂರು:ರಾಜ್ಯ ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರಗಿ ಪೀಠಗಳಿಗೆ ಇದೇ ಏಪ್ರಿಲ್ 25ರಿಂದ ಮೇ21ರವರೆಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ಆದೇಶಾನುಸಾರ ಹೈಕೋರ್ಟ್ನ ರಿಜಿಸ್ಟ್ರಾರ್ (ನ್ಯಾಯಾಂಗ) ಕೆ.ಎಸ್.ಭರತ್ ಕುಮಾರ್ ನೋಟಿಫಿಕೇಷನ್ ಹೊರಡಿಸಿದ್ದಾರೆ.
ಈ ಅವಧಿಯ ನಡುವೆ 7 ದಿನಗಳು ರಜಾ ಕಾಲದ ನ್ಯಾಯಪೀಠಗಳು ಬೆಂಗಳೂರು ಪ್ರಧಾನ ಪೀಠದಲ್ಲಿ ಕಾರ್ಯ ನಿರ್ವಹಿಸಲಿವೆ. ಧಾರವಾಡ ಹಾಗೂ ಕಲಬುರಗಿ ಪೀಠಗಳಲ್ಲಿ ಭೌತಿಕ ವಿಚಾರಣೆ ಇರುವುದಿಲ್ಲ. ಬದಲಿಗೆ ಈ ಪೀಠಗಳಲ್ಲಿ ದಾಖಲಾಗುವ ತುರ್ತು ಪ್ರಕರಣಗಳು ಬೆಂಗಳೂರಿನ ಪ್ರಧಾನ ಪೀಠದಲ್ಲಿ ಆನ್ಲೈನ್ ಮೂಲಕ ವಿಚಾರಣೆ ನಡೆಯಲಿವೆ. ಹಾಗಿದ್ದೂ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಪ್ರಕರಣ ದಾಖಲಿಸಲು ವಾರಪೂರ್ತಿ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10 ರಿಂದ 12ರ ನಡುವೆ ನೇರವಾಗಿ ಅಥವಾ ಇ-ಫೈಲಿಂಗ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ:ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯಲ್ಲಿ ಬದಲಾವಣೆ, ಸರಳವಾಗಿರಲಿದೆ ಈ ವರ್ಷದ ಪರೀಕ್ಷೆ