ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಆರ್.ರೋಷನ್ ಬೇಗ್ ವಿರುದ್ಧ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ.
ಐಎಂಎ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮಾಲೀಕನಾಗಿರುವ ಮೊಹಮ್ಮದ್ ಮನ್ಸೂರ್ ಖಾನ್ ಹಣ ಹೂಡಿಕೆ ಮಾಡಿಸಿಕೊಂಡು ಅಸಲು, ಬಡ್ಡಿ ಹಣವನ್ನೂ ನೀಡದೆ 1 ಲಕ್ಷ ಠೇವಣಿದಾರರಿಂದ 4 ಸಾವಿರ ಕೋಟಿ ರೂಪಾಯಿ ವಂಚಿಸಿದ ಆರೋಪದಡಿ ಸಿಬಿಐ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿತ್ತು.
ಇದೇ ಪ್ರಕರಣದಲ್ಲಿ ಐಎಂಎ ಕಂಪನಿ ಪರವಾಗಿ ಪ್ರಮೋಟ್ ಮಾಡಲು ರೋಷನ್ ಬೇಗ್ ಹಣ ಪಡೆದು ಚುನಾವಣಾ ವೆಚ್ಚಗಳಿಗೆ ಬಳಸಿಕೊಂಡಿದ್ದಾರೆ. ಅಮಾಯಕರಿಗೆ ಹಣ ಹೂಡಿಕೆ ಮಾಡಲು ಪ್ರಚೋದನೆ ನೀಡಿದ್ದಾರೆ ಎಂಬ ಆರೋಪವಿದೆ. ಸದ್ಯ ಪ್ರಕರಣದಲ್ಲಿ ರೋಷನ್ ಬೇಗ್ ಅವರನ್ನು 29ನೇ ಆರೋಪಿಯಾಗಿ ಮಾಡಲಾಗಿದೆ.