ಬೆಂಗಳೂರು:ರಾಮ ಮಂದಿರ-ಬಾಬರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ತೀರ್ಪು ಇಂದು ಸುಪ್ರೀಂಕೋರ್ಟ್ನಿಂದ ಹೊರಬೀಳಲಿದೆ. ಹೀಗಾಗಿ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಸರ್ಕಾರ ಇಂದು ರಜೆ ಘೋಷಣೆ ಮಾಡಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ರಾಜ್ಯಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ರಜೆ ಘೋಷಿಸಿದೆ. ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಕೊಡಗು ಪೊಲೀಸರು ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಟ್ಟಿದ್ದು, ಪ್ರಚೋದನಾತ್ಮಕ ಪೋಸ್ಟ್‌ಗಳನ್ನು ಜಾಲತಾಣದಲ್ಲಿ ಹರಡಬೇಡಿ ಎಂದು ಮನವಿ ಮಾಡಿದ್ದಾರೆ. ಪಬ್ಲಿಕ್ ವಾಟ್ಸ್ಆ್ಯಪ್ ಗ್ರೂಪ್ ಅಡ್ಮಿನ್‌ಗಳು ಗ್ರೂಪ್ ಸೆಟ್ಟಿಂಗ್ ಚೇಂಜ್ ಮಾಡಿಕೊಳ್ಳಿ. ಅಡ್ಮಿನ್ ಓನ್ಲಿ ಮೋಡ್‌ಗೆ ಬದಲಾಯಿಸಿಕೊಂಡು ಪ್ರಚೋದನಾತ್ಮಕ ಪೋಸ್ಟ್ ತಡೆಯಿರಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಡಿ.ಪನ್ನೇಕರ್ ಸಲಹೆ ನೀಡಿದ್ದಾರೆ.