ಬೆಂಗಳೂರು : ವಿಧಾನಪರಿಷತ್ ಸದಸ್ಯರಾಗಿ ಸೂರಜ್ ರೇವಣ್ಣ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದರು.
ಸೂರಜ್ ರೇವಣ್ಣ ಪ್ರಮಾಣವಚನ ಸ್ವೀಕಾರ ವಿಧಾನಸೌಧದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ದೇವರ ಹೆಸರಲ್ಲಿ ಸೂರಜ್ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ಹಾಸನ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಇದನ್ನೂ ಓದಿ:ಸಿಎಂ ಇಬ್ರಾಹಿಂ ನಿವಾಸಕ್ಕೆ ಹೆಚ್ ಡಿ ಕುಮಾರಸ್ವಾಮಿ ಭೇಟಿ.. ಕುತೂಹಲ ಮೂಡಿಸಿದ ನಾಯಕರ ಚರ್ಚೆ
ಈ ವೇಳೆ ಸೂರಜ್ ತಾಯಿ ಭವಾನಿ ರೇವಣ್ಣ ಉಪಸ್ಥಿತರಿದ್ದರು. ತಾಯಿಗೆ ನಮಸ್ಕರಿಸಿ ಸೂರಜ್ 10.17 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಿದರು. ಶಾಸಕರಾದ ಹೆಚ್.ಕೆ. ಕುಮಾರಸ್ವಾಮಿ, ಶಿವಲಿಂಗೇಗೌಡ, ತಿಪ್ಪೇಸ್ವಾಮಿ ಈ ವೇಳೆ ಹಾಜರಿದ್ದರು. ಸೂರಜ್ ಪ್ರಮಾಣವಚನ ಸ್ವೀಕರಿಸಿದ ನಂತರ ತಡವಾಗಿ ಹೆಚ್.ಡಿ. ರೇವಣ್ಣ ಆಗಮಿಸಿದರು.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ