ಬೆಂಗಳೂರು: ಉಪ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಸಾಧನೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ ಬೆನ್ನಲ್ಲೇ ಕೇಂದ್ರ ಸಚಿವ ಸುರೇಶ್ ಅಂಗಡಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದರು.
ಬಿಎಸ್ವೈ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ ಸುರೇಶ್ ಅಂಗಡಿ..! - ಕೇಂದ್ರ ಸಚಿವ ಸುರೇಶ್ ಅಂಗಡಿ ಸುದ್ದಿ
ಉಪ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಸಾಧನೆಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ ಬೆನ್ನಲ್ಲೇ ಕೇಂದ್ರ ಸಚಿವ ಸುರೇಶ್ ಅಂಗಡಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸಿದರು.
![ಬಿಎಸ್ವೈ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ ಸುರೇಶ್ ಅಂಗಡಿ..! Suresh Angadi Meet To CM BSY](https://etvbharatimages.akamaized.net/etvbharat/prod-images/768-512-5380803-thumbnail-3x2-d.jpg)
ಬಿಎಸ್ವೈ ಭೇಟಿಯಾದ ಕೇಂದ್ರ ಸಚಿವ ಸುರೇಶ್ ಅಂಗಡಿ..!
ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಆಗಮಿಸಿ. ಉಪಚುನಾವಣೆಯಲ್ಲಿ ಪಕ್ಷದ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಫಲಿತಾಂಶಕ್ಕೆ ಕೇಂದ್ರದ ನಾಯಕರು ಹರ್ಷ ವ್ಯಕ್ತಪಡಿಸಿದ್ದನ್ನೂ ಸಿಎಂ ಗಮನಕ್ಕೆ ತಂದರು.
ನಂತರ ಸೌಹಾರ್ದಯುತವಾಗಿ ರಾಜ್ಯದ ರೈಲ್ವೆ ಯೋಜನೆಗಳ ಕುರಿತು ಅನೌಪಚಾರಿಕ ಮಾತುಕತೆ ನಡೆಸಿದ ಅವರು, ರೈಲ್ವೆ ಯೋಜನೆಗಳಿಗೆ ವೇಗ ನೀಡುವುದು, ರಾಜ್ಯ ಸರ್ಕಾರದಿಂದ ಸೂಕ್ತ ಸಹಕಾರ ನೀಡುವ ಕುರಿತು ಮಾತುಕತೆ ನಡೆಸಿದರು ಎನ್ನಲಾಗಿದೆ.