ಕರ್ನಾಟಕ

karnataka

ETV Bharat / state

ಶಾಲೆ-ಕಾಲೇಜು ಪ್ರಾರಂಭಿಸುವ ಯೋಚನೆ ಸದ್ಯಕ್ಕಿಲ್ಲ: ಸಚಿವ ಸುರೇಶ್ ಕುಮಾರ್ - ಶಿಕ್ಷಣ ಸಚಿವ

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪ್ರಾರಂಭಿಸುವ ಯೋಚನೆಯೂ ಕೂಡ ಸರ್ಕಾರದ ಮುಂದೆ ಇಲ್ಲವೆಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Suresh kumar
ಸಚಿವ ಸುರೇಶ್ ಕುಮಾರ್

By

Published : Sep 29, 2020, 10:42 AM IST

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ಸದ್ಯಕ್ಕೆ ಶಾಲೆ-ಕಾಲೇಜುಗಳ ಪ್ರಾರಂಭದ ಕುರಿತು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಮಾರ್ಚ್​​​ನಲ್ಲಿ ಬಂದ್ ಆದ ಶಾಲಾ ಕಾಲೇಜುಗಳನ್ನು ಜುಲೈ-ಆಗಸ್ಟ್ ನಂತರ ಸೆಪ್ಟಂಬರ್​​ನಲ್ಲಿ ಆರಂಭಿಸುವುದಾಗಿ ಸರ್ಕಾರ ಚಿಂತನೆ ನಡೆಸಿತ್ತು. ಆದ್ರೆ ಕೊರೊನಾ‌ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ‌ಅನ್‌ಲಾಕ್ 4.O ನಂತರ ಶಾಲೆ-ಕಾಲೇಜು ಆರಂಭಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.

ಅಕ್ಟೋಬರ್​ನಲ್ಲಿ ಶಾಲೆ-ಕಾಲೇಜು ಆರಂಭವಾಗುತ್ತಾ? ಅನ್ನೋ ಪ್ರಶ್ನೆಗೆ ಇದೀಗ ಶಿಕ್ಷಣ ಸಚಿವರೇ ಸ್ಪಷ್ಟನೆ ನೀಡಿದ್ದಾರೆ. ಶಾಲೆ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ‌ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭಿಸುವ ಯೋಚನೆಯು ಕೂಡ ಸರ್ಕಾರದ ಮುಂದೆ ಇಲ್ಲ. ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಬಗ್ಗೆ ಸಾಕಷ್ಟು ಚರ್ಚೆ, ಅಭಿಪ್ರಾಯ ಸಂಗ್ರಹ, ಪೋಷಕರ ಸಲಹೆ ಎಲ್ಲವನ್ನು ಪಡೆಯಬೇಕಿದೆ. ಅಲ್ಲಿಯವರೆಗೆ ರಾಜ್ಯದ ಶಾಲೆ-ಕಾಲೇಜು ಪ್ರಾರಂಭಿಸುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವ ಸುರೇಶ್​ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details