ಬೆಂಗಳೂರು: ಲಾಕ್ಡೌನ್ ನಂತರ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಾಂಕ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಬಾರಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಪಾಲನೆಯ ಕ್ರಮಗಳೂ ಸೇರಿ ಹೆಚ್ಚಿನ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ ಡಿಡಿಪಿಐಗಳಿಗೆ ಸಚಿವ ಸುರೇಶ್ ಕುಮಾರ್ ಪತ್ರ - ಎಸ್ಎಸ್ಎಲ್ಸಿ ಪರೀಕ್ಷೆ
ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಾಂಕ ಘೋಷಣೆಯಾಗಿದ್ದು, ಮುಂದೆ ಅಧಿಕಾರಿಗಳು ನಿರ್ವಹಿಸಬೇಕಾದ ಕ್ರಮಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಎಸ್ಎಲ್‌ಎಲ್‌ಸಿ ಪರೀಕ್ಷೆ ಹಿನ್ನೆಲೆ ಡಿಡಿಪಿಐ ಗಳಿಗೆ ಸಚಿವ ಸುರೇಶ್ ಕುಮಾರ್ ಪತ್ರ
ಹೀಗಾಗಿ, ತಾವೆಲ್ಲ ಸಮರ್ಥವಾಗಿ ಕಾರ್ಯ ನಿರ್ವಹಿಸಬೇಕು ಮತ್ತು ವಿದ್ಯಾರ್ಥಿಗಳ ಕಲಿಕೆಯ ಹಿತಕ್ಕಾಗಿ ಪುನರ್ಮನನ ತರಗತಿಗಳು ಸೇರಿದಂತೆ ಇಲಾಖೆ ಕೈಗೊಂಡಿರುವ ಉಪಕ್ರಮಗಳು ಸಮರ್ಪಕವಾಗಿ ಉಪಯೋಗವಾಗುತ್ತಿವೆಯೇ ಎಂಬ ಕುರಿತು ಗಮನ ಹರಿಸಬೇಕು. ಜೊತೆಗೆ ಈ ಬಾರಿಯ ಪರೀಕ್ಷೆಯನ್ನು ಯಾವ ರೀತಿ ನಿರ್ವಹಿಸಬೇಕೆಂದು ಸೂಚಿಸುವಂತೆ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐಗಳಿಗೆ ಪತ್ರ ಬರೆದಿದ್ದಾರೆ.
Last Updated : May 19, 2020, 7:39 PM IST