ಕರ್ನಾಟಕ

karnataka

ETV Bharat / state

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಮುಂದಿನ ಐದು ದಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ - kannada top news

ಮುಂದಿನ 5 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

surface-cyclone-in-bay-of-bengal-thunderstorm-with-lightning-rain-in-most-districts
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಮುಂದಿನ ಐದು ದಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ

By

Published : May 25, 2023, 8:04 PM IST

ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಮುಂದಿನ ಐದು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಹಾಸನದಲ್ಲಿ ಮೇ 26 ರಿಂದ ಮೇ 30ರವರೆಗೆ ಭಾರೀ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಗದಗ, ಹಾವೇರಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಮುಂದಿನ ಐದು ದಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಇಂದೂ ಸುರಿದ ಮಳೆ:ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಗುರುವಾರವೂ ಮುಂದುವರಿದಿದೆ. ದಕ್ಷಿಣ ಕನ್ನಡ, ಮಂಡ್ಯ ಹಾಗೂ ತುಮಕೂರು ಸೇರಿ ರಾಜ್ಯದ ಕೆಲ ಭಾಗಗಳಲ್ಲಿ ಬಿರುಸಾಗಿ ಮಳೆ ಸುರಿದಿದೆ ಎಂದು ಹೇಳಿದೆ.

ನಿನ್ನೆ ದಾಖಲಾದ ಮಳೆಯ ಪ್ರಮಾಣ:ಚಿತ್ರದುರ್ಗ ಜಿಲ್ಲೆಯ ಬಿ.ದುರ್ಗದಲ್ಲಿ 7 ಸೆಂ.ಮೀ, ಕೊಡಗು ಜಿಲ್ಲೆಯ ನಾಪೋಕ್ಲು 6 ಸೆಂ.ಮೀ, ಹಾವೇರಿ ಜಿಲ್ಲೆಯ ರಾಣಿಬೆನ್ನೂರು, ಕೋಲಾರ ಜಿಲ್ಲೆಯ ರಾಯಲಪಾಡು, ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯಲ್ಲಿ ತಲಾ 3, ಕಲಬುರ್ಗಿ ಜಿಲ್ಲೆಯ ಸೇಡಂ, ಮೈಸೂರು ಜಿಲ್ಲೆಯ ಸರಗೂರು ಮತ್ತು ಚಿತ್ರದುರ್ಗದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶೇಕಡ 10 ರಷ್ಟು ಹೆಚ್ಚಾದ ಮಳೆ:ಮೇ 1 ರಿಂದ ಮೇ 25ರವರೆಗೆ ರಾಜ್ಯಾದ್ಯಂತ 95 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 105 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.10 ಹೆಚ್ಚಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಸುರಿದರೆ, ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆ ಕುಂಠಿತವಾಗಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಮುಂದಿನ ಐದು ದಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಕೇವಲ ಒಂದು ಗಂಟೆ ಮಳೆಗೆ ನಲುಗಿದ್ದ ರಾಜಧಾನಿ:ಕಳೆದಭಾನುವಾರಮಧ್ಯಾಹ್ನ 3 ಗಂಟೆಯಿಂದ ಪ್ರಾರಂಭವಾದ ಮಳೆ ಸುಮಾರು ಒಂದು ಗಂಟೆ ಕಾಲ ಧಾರಾಕಾರವಾಗಿ ಸುರಿಯಿತು ಈ ವೇಳೆ ಹಲವು ಅವಾಂತರಗಳು ಸೃಷ್ಟಿಯಾಗಿತ್ತು. ಗುಡುಗು - ಸಿಡಿಲು ಸಹಿತ ಮಳೆ ಅಬ್ಬರಿಸಿದ್ದ ಮಳೆಯಿಂದಾಗಿ ನಗರದ ವಿಧಾನಸೌಧ, ಆನಂದ್ ರಾವ್, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆಆರ್ ಸರ್ಕಲ್, ಟೌನ್ ಹಾಲ್, ಕಾರ್ಪೊರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ಜಯನಗರ, ಮಲ್ಲೇಶ್ವರ ಸೇರಿ ಹಲವೆಡೆ ವಾಹನ ಸವಾರರು ದಾರಿ ಕಾಣದೆ ರಸ್ತೆಯ ಪಕ್ಕದಲ್ಲಿ ವಾಹನಗಳನ್ನು ನಿಲ್ಲಿಸುವ ಅನಿವಾರ್ಯತೆ ಸೃಷ್ಟಿಯಾಗಿತ್ತು.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಮುಂದಿನ ಐದು ದಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ

ಇದನ್ನೂ ಓದಿ:ಶಿವಮೊಗ್ಗದಲ್ಲಿ 41 ನೇ ರೈತ ಹುತಾತ್ಮ ದಿನಾಚರಣೆ: ರೈತ ವಿರೋಧಿ 3 ಕೃಷಿ ಕಾಯಿದೆ ರದ್ದುಪಡಿಸಲು ರೈತ ಸಂಘದ ಆಗ್ರಹ

ABOUT THE AUTHOR

...view details