ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬಳಿ ನನ್ನ ಅಹವಾಲು ಸಲ್ಲಿಕೆ ಮಾಡಿದ್ದೇನೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಿಳಿಸಿದ್ದಾರೆ.
ಸಂಪತ್ ರಾಜ್ ವಿರುದ್ಧ ಸುರ್ಜೇವಾಲ ಕ್ರಮದ ಭರವಸೆ ನೀಡಿದ್ದಾರೆ: ಅಖಂಡ ಶ್ರೀನಿವಾಸಮೂರ್ತಿ - Sampath Raj
ಬಿಬಿಎಂಪಿ ಚುನಾವಣೆಯಲ್ಲಿ ಸಂಪತ್ ರಾಜ್ಗೆ ಟಿಕೆಟ್ ಕೊಡಬಾರದು ಎಂದು ಮನವಿ ಮಾಡಿ ಬಂದಿದ್ದೇನೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ.
ಅಖಂಡ ಶ್ರೀನಿವಾಸಮೂರ್ತಿ
ಕುಮಾರಕೃಪ ಅತಿಥಿ ಗೃಹದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಂಪತ್ ರಾಜ್ ಸಸ್ಪೆಂಡ್ ಮಾಡಿ ಅಂತಾ ಮನವಿ ಮಾಡಿಕೊಂಡಿದ್ದೇನೆ. ಹೈಕಮಾಂಡ್ ಜೊತೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಘಟನೆಯಲ್ಲಿ ನನ್ನ ಮನೆಗೆ ಬೆಂಕಿ ಇಟ್ಟ ಪ್ರಕರಣದ ಸಂಪೂರ್ಣ ಮಾಹಿತಿ ನೀಡಿದ್ದೇನೆ.
ರಾಮಲಿಂಗಾರೆಡ್ಡಿ ಬೆಂಗಳೂರಿನಲ್ಲಿ ಪಕ್ಷದ ಹಿರಿಯ ರಾಜಕಾರಣಿ. ನಮ್ಮ ನಾಯಕರು ಅವರು. ನಮಗೆ ಅವರಿಂದ ಹಾಗೂ ಪಕ್ಷದ ಎಲ್ಲಾ ನಾಯಕರಿಂದಲೂ ಸಹಕಾರ ಸಿಕ್ಕಿದೆ. ಪಕ್ಷದ ಎಲ್ಲಾ ನಾಯಕರು ನನ್ನ ಪರವಾಗಿದ್ದಾರೆ ಎಂಬ ವಿಶ್ವಾಸ ಇದೆ ಎಂದು ವಿವರಿಸಿದರು.