ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ, ಕರ್ನಾಟಕ No 1 ಆಗಲಿದೆ: ಸುರ್ಜೆವಾಲಾ ವಿಶ್ವಾಸ - Surjewala says Congress will return to power in Karnataka

ಜನಸಾಮಾನ್ಯರನ್ನು ತಲುಪಿ, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಕಾರ್ಯ ವೈಖರಿಯನ್ನು ಪಕ್ಷವು ವಿಶೇಷವಾಗಿ ಶ್ಲಾಘಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.

ಸುರ್ಜೆವಾಲಾ
ಸುರ್ಜೆವಾಲಾ

By

Published : Dec 30, 2021, 7:49 PM IST

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಟ್ಟು ನಮಗೆ ಆಶೀರ್ವಾದ ಮಾಡಿದ ಎಲ್ಲ ಕನ್ನಡಿಗ ಸಹೋದರ - ಸಹೋದರಿಯರಿಗೆ ಕಾಂಗ್ರೆಸ್ ಪಕ್ಷ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತದೆ. ಜನಸಾಮಾನ್ಯರನ್ನು ತಲುಪಿ, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಕಾರ್ಯ ವೈಖರಿಯನ್ನು ಪಕ್ಷವು ವಿಶೇಷವಾಗಿ ಶ್ಲಾಘಿಸುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ 58 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗೆಲುವು ಭರ್ಜರಿ ಗೆಲುವು ಸಾಧಿಸಿದೆ. ಕರ್ನಾಟಕ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 500 ವಾರ್ಡ್‌ಗಳಲ್ಲಿ ಜಯ ಸಾಧಿಸಿದ್ದರೆ, ಆಡಳಿತಾರೂಢ ಬಿಜೆಪಿ 435 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 45 ವಾರ್ಡ್‌ಗಳಲ್ಲಿ ಮಾತ್ರ ಗೆದ್ದಿದೆ ಎಂದಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ 10ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ.. ಕಲಬುರಗಿ ಬಾಲಕನ ಬಂಧನ

ಇತ್ತೀಚಿನ ಚುನಾವಣಾ ಫಲಿತಾಂಶಗಳಿಂದ ಅಭಿವೃದ್ಧಿ ಕೆಲಸಗಳನ್ನ ಕೈಬಿಟ್ಟು, ಆಡಳಿತ ಯಂತ್ರವನ್ನು ನಿಷ್ಕ್ರಿಯಗೊಳಿಸಿದ ಅಕ್ರಮ ಮತ್ತು ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನರು ಕಾಯುತ್ತಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿನ ಮತ ಹಂಚಿಕೆಯು ರಾಜ್ಯದಲ್ಲಿ ಬಿಜೆಪಿಯ ಜನಪ್ರಿಯತೆಯ ಭಾರಿ ಕುಸಿತವನ್ನು ಸೂಚಿಸುತ್ತದೆ.

ಕಾಂಗ್ರೆಸ್‌ನ ಮತ ಹಂಚಿಕೆಯು ಶೇ 42.06 ಕ್ಕೆ ಏರಿದ್ದು, ಬಿಜೆಪಿ ಮತ್ತು ಜೆಡಿಎಸ್ ಕ್ರಮವಾಗಿ ಶೇ 36.9 ಮತ್ತು ಶೇ 3.8ರಷ್ಟು ಮತ ಪಡೆದಿವೆ. ಕೇಂದ್ರ - ರಾಜ್ಯ ಬಿಜೆಪಿ ಆಡಳಿತದಲ್ಲಿ ದೇಶವು ಹಲವು ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿದೆ.

ಮತದಾರರು ಬೆಲೆ ಏರಿಕೆ, ಆದಾಯ ಕುಸಿತ, ಉದ್ಯೋಗ ನಷ್ಟ, ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಜನರ ಹಿತದ ಬಗೆಗಿನ ಬಿಜೆಪಿ ಸರ್ಕಾರದ ನಿರಾಸಕ್ತಿಯನ್ನು ಗಮನಿಸಿ ತಕ್ಕ ಉತ್ತರ ನೀಡುತ್ತಾರೆ ಎಂಬುದು ತಡವಾಗಿ ಬಂದ ಸತತ ಚುನಾವಣಾ ಫಲಿತಾಂಶಗಳು ಸ್ಪಷ್ಟವಾಗಿ ಸಾಬೀತುಪಡಿಸಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಮತಾಂತರ ವಿರೋಧಿ ಕಾನೂನು ಮತ್ತು ದೇವಾಲಯಗಳ ನಿರ್ವಹಣೆಯಂತಹ ಜನರ ದಾರಿತಪ್ಪಿಸುವ ಬಿಜೆಪಿಯ ತಂತ್ರಗಳನ್ನು ಜನ ಗಂಭೀರವಾಗಿ ತೆಗೆದುಕೊಂಡಿಲ್ಲ. ವಿಭಜಕ ಶಕ್ತಿಗಳ ಪಿತೂರಿಗಳನ್ನು ಪ್ರಗತಿಪರ ಕನ್ನಡಿಗರು ಅರಿತಿದ್ದಾರೆ. ಅಸಮರ್ಥ ಮತ್ತು ಭ್ರಷ್ಟ ಬೊಮ್ಮಾಯಿ ಸರ್ಕಾರವು ಅಭಿವೃದ್ಧಿ ಮತ್ತು ಪ್ರಗತಿಗೆ ಸಂಪೂರ್ಣ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

For All Latest Updates

TAGGED:

ABOUT THE AUTHOR

...view details