ಕರ್ನಾಟಕ

karnataka

ETV Bharat / state

ಸ್ವದೇಶ್‌ ದರ್ಶನ್‌ ಯೋಜನೆಯಲ್ಲಿ ಮೈಸೂರು ಹಾಗೂ ಹಂಪಿ ಸೇರ್ಪಡೆ - ಪ್ರವಾಸಿ ನಗರಿ ಮೈಸೂರು

ಸ್ವದೇಶ ದರ್ಶನ್‌ 2.0 ಯೋಜನೆಯಲ್ಲಿ ರಾಜ್ಯದ ಹಂಪಿ ಹಾಗೂ ಮೈಸೂರು ಸೇರ್ಪಡೆ ಹಿನ್ನೆಲೆಯಲ್ಲಿ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Mysore and Hampi included in Swadesh Darshan 2.0 project
ಸ್ವದೇಶ ದರ್ಶನ್‌ 2.0 ಯೋಜನೆಗೆ ಮೈಸೂರು ಹಾಗೂ ಹಂಪಿ ಸೇರ್ಪಡೆ

By

Published : Jan 6, 2023, 2:27 PM IST

ಬೆಂಗಳೂರು :ಕೇಂದ್ರ ಸರಕಾರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯದ ವತಿಯಿಂದ ಪ್ರಾರಂಭಿಸಲಾದ ಸ್ವದೇಶ ದರ್ಶನ್‌ 2.0 ಯೋಜನೆಯಲ್ಲಿ ರಾಜ್ಯದ ಹಂಪಿ ಹಾಗೂ ಮೈಸೂರು ಸೇರ್ಪಡೆಯಾಗಿರುವುದಕ್ಕೆ ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿ, ಹಜ್‌ ಮತ್ತು ವಕ್ಪ್‌ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಂತಸ ವ್ಯಕ್ತಪಡಿಸಿದ್ದಾರೆ. ಸ್ವದೇಶ್ ದರ್ಶನ್ ಯೋಜನೆಯು ಕೇಂದ್ರೀಯ ವಲಯದ ಯೋಜನೆಯಾಗಿದ್ದು 2014-15 ರಲ್ಲಿ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯ, ಭಾರತ ಸರ್ಕಾರವು ಥೀಮ್ ಆಧಾರಿತ ಪ್ರವಾಸಿ ಸರ್ಕ್ಯೂಟ್‌ಗಳ ಸಮಗ್ರ ಅಭಿವೃದ್ಧಿಗಾಗಿ ಪ್ರಾರಂಭಿಸಲಾಗಿತ್ತು. ಈ ಯೋಜನೆಯು ಭಾರತದಲ್ಲಿ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಉತ್ತೇಜಿಸಲು, ಅಭಿವೃದ್ಧಿಪಡಿಸಲು ಮತ್ತು ಬಳಸಿಕೊಳ್ಳುವ ಗುರಿ ಹೊಂದಿದೆ.

ಸ್ವದೇಶ್ ದರ್ಶನ್ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಸಚಿವಾಲಯವು ಕೇಂದ್ರ ಹಣಕಾಸು ನೆರವನ್ನು ರಾಜ್ಯ ಸರ್ಕಾರಗಳಿಗೆ, ಕೇಂದ್ರಾಡಳಿತ ಪ್ರದೇಶದ ಆಡಳಿತಗಳಿಗೆ ಸರ್ಕ್ಯೂಟ್‌ಗಳ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸುತ್ತದೆ. ಇದರಿಂದಾಗಿ ಆಯಾ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಪ್ರೇರಕ ಶಕ್ತಿ, ವಿವಿಧ ಕ್ಷೇತ್ರಗಳೊಂದಿಗೆ ಸಿನರ್ಜಿ ನಿರ್ಮಿಸಲು ಪ್ರವಾಸೋದ್ಯಮ ಕ್ಷೇತ್ರವನ್ನು ಪ್ರಮುಖವಾಗಿರಿಸುವ ಕಲ್ಪನೆಯೊಂದಿಗೆ ಸ್ವಚ್ಛ ಭಾರತ ಅಭಿಯಾನ, ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ ಮುಂತಾದ ಇತರ ಯೋಜನೆಗಳೊಂದಿಗೆ ಸಂಯೋಜಿಸಲು ಈ ಯೋಜನೆಯನ್ನು ರೂಪಿಸಲಾಗಿದೆ. ಆಯಾ ನಗರಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಅಭಿವೃದ್ದಿಗೊಳಿಸಲು ಇದು ಬಹಳ ಅನುಕೂಲವಾಗಲಿದೆ. ಈ ಯೋಜನೆಯ ಅಡಿಯಲ್ಲಿ ಹಂಪಿ ಹಾಗೂ ಮೈಸೂರು ನಗರಗಳು ಇನ್ನಷ್ಟು ಅಭಿವೃದ್ದಿಯನ್ನು ಹೊಂದಲಿವೆ ಎಂದು ತಿಳಿಸಿದ್ದಾರೆ.

ಸ್ವದೇಶ ದರ್ಶನ್ ಯೋಜನೆಗೆ ಮೈಸೂರು ಸೇರ್ಪಡೆಗೆ ಅಭಿನಂದನೆ:ಸ್ವದೇಶ ದರ್ಶನ್ 2.0 ಯೋಜನೆಗೆ ಸಾಂಸ್ಕೃತಿಕ ನಗರ ಮೈಸೂರು, ಪಾರಂಪರಿಕ ನಗರ ಹಂಪಿ ಸೇರ್ಪಡೆ ಆಗಿರುವುದು ಹೆಮ್ಮೆಯ ಸಂಗತಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗುವುದರ ಜೊತೆಗೆ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.
ಕೇಂದ್ರೀಯ ಸ್ವದೇಶ್ ದರ್ಶನ್ ಯೋಜನೆಯಡಿಯಲ್ಲಿ, ಪ್ರವಾಸೋದ್ಯಮ ಸಚಿವಾಲಯವು ಕೇಂದ್ರ ಹಣಕಾಸು ನೆರವನ್ನು ರಾಜ್ಯ ಸರ್ಕಾರಗಳಿಗೆ, ಸರ್ಕ್ಯೂಟ್‌ಗಳ ಮೂಲಸೌಕರ್ಯ ಅಭಿವೃದ್ಧಿಗೆ ಒದಗಿಸುತ್ತದೆ. ಇದರಿಂದ ಆಯಾ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಯಾಗಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರವಾಸಿ ನಗರಿ ಮೈಸೂರು: ಅರಮನೆಗಳ ನಗರಿ, ಸಾಂಸ್ಕೃತಿಕ ನಗರಿ ಎಂಬ ಮೈಸೂರು ಪ್ರವಾಸಿ ನಗರಿಯೂ ಹೌದು. ಮೈಸೂರಿಗೆ ಅತಿ ಹೆಚ್ಚು ಪ್ರವಾಸಿಗರು ದೇಶ ವಿದೇಶಗಳಿಂದ ಆಗಮಿಸುತ್ತಾರೆ. ಇನ್ನು ಮೈಸೂರಿನಲ್ಲಿರುವ ಪ್ರವಾಸಿ ತಾಣಗಳ ವಿವರ ನೋಡುವುದಾದರೆ, ಮೈಸೂರು ಅರಮನೆ ವಿಶ್ವ ವಿಖ್ಯಾತವಾಗಿದ್ದು ಅರಮನೆಯ ಭವ್ಯತೆಯನ್ನು ನೋಡಿ ಕಣ್ಣು ತಂಪು ಮಾಡಿಕೊಳ್ಳಲು ಅತಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಾರೆ. ಇನ್ನು ಮಕ್ಕಳನ್ನಲ್ಲದೆ ವೃದ್ಧರವರೆಗು ಸೆಳೆಯುವಂಥದ್ದು ಹಳೆಯ ಮೃಗಾಲಯ ಚಾಮರಾಜೇಂದ್ರ. ನಾಡದೇವತೆಯ ಚಾಮುಂಡಿ ಬೆಟ್ಟ, ಸೇಂಟ್​ ಫಿಲೋಮಿನಾ ಚರ್ಚ್​, ಕೆ.ಆರ್​.ಎಸ್​ ನ ಬೃಂದಾವನ, ಬಂಡೀಪುರ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ.

ಐತಿಹಾಸಿಕ ಸ್ಥಳ ಹಂಪಿ:ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ಹಂಪಿ ತನ್ನ ಇತಿಹಾಸದಿಂದ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತದೆ. ಇಲ್ಲಿ ಮುಖ್ಯವಾಗಿ ನೋಡಬಹುದಾದ ಸ್ಮಾರಕಗಳೆಂದರೆ, ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ, ಅಚ್ಯುತರಾಯ ದೇಗುಲ, ಆನೆಗೊಂದಿ, ಅಂಜನಾದ್ರಿ ಪರ್ವತ, ವಿರೂಪಾಕ್ಷೇಶ್ವರ ದೇವಾಲಯ, ತುಂಗಭದ್ರ ನದಿ, ಪುರಂದರ ಮಂಟಪ, ವಿಜಯವಿಠ್ಠಲ ದೇಗುಲ, ಕಲ್ಲಿನ ತೇರು , ಉಗ್ರ ನರಸಿಂಹ, ಕಡಲೆಕಾಳು ಗಣಪತಿ, ಸಾಸಿವೆಕಾಳು ಗಣಪತಿ, ರಾಣಿ ಸ್ನಾನಗೃಹ, ಹಂಪೆ ಬಜಾರ್, ಹೇಮಕೂಟ ಇದಲ್ಲದೇ ಇನ್ನೂ ಅನೇಕ ಪ್ರವಾಸಿ ತಾಣಗಳು ಇಲ್ಲಿವೆ.

ಇದನ್ನೂ ಓದಿ:1 ಲಕ್ಷ ಕೋಟಿ ಮೊತ್ತದ ಹೆದ್ದಾರಿ ಕಾಮಗಾರಿ ಪ್ರಸ್ತಾವನೆಗಳಿಗೆ ಶೀಘ್ರ ಸಮ್ಮತಿ: ಸಿಎಂ ಬೊಮ್ಮಾಯಿ

ABOUT THE AUTHOR

...view details