ಬೆಂಗಳೂರು:ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರು ಜಾರ್ಖಂಡ್ ನೂತನ ಸಿಎಂ ಹೇಮಂತ್ ಸುರೇನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾರ್ಖಂಡ್ಗೆ ತೆರಳಿದರು.
ಹೇಮಂತ್ ಸುರೇನ್ ಪ್ರಮಾಣವಚನ ಸಮಾರಂಭ: ಜಾರ್ಖಂಡ್ಗೆ ತೆರಳಿದ ಡಿಕೆಶಿ
ಜಾರ್ಖಂಡ್ನ ನೂತನ ಸಿಎಂ ಆಗಿ ಇಂದು ಅಧಿಕಾರ ವಹಿಸಿಕೊಳ್ಳಲಿರುವ ಹೇಮಂತ್ ಸುರೇನ್ ದೇಶದ ಎಲ್ಲ ರಾಜ್ಯಗಳ ಹಿರಿಯ ರಾಜಕೀಯ ನಾಯಕರನ್ನು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ. ರಾಜ್ಯ ಕಾಂಗ್ರೆಸ್ನಿಂದ ಮಾಜಿ ಸಚಿವ ಡಿ ಕೆ ಶಿವಕುಮಾರ್ ಸಹ ಆಹ್ವಾನಿತರಾಗಿ ತೆರಳಿದ್ದಾರೆ.
ಅತ್ಯಂತ ಚಿಕ್ಕ ರಾಜ್ಯವಾಗಿದ್ದರೂ ಐದು ಹಂತಗಳಲ್ಲಿ ಚುನಾವಣೆ ಎದುರಿಸಿದ್ದ ಜಾರ್ಖಂಡ್ನಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್, ಆರ್ಜೆಡಿ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮೈತ್ರಿಕೂಟದ ಕೈ ಹಿಡಿದಿರುವ ಮತದಾರರು ಮೈತ್ರಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಟ್ಟು 81 ಸ್ಥಾನಗಳ ಪೈಕಿ ಮೈತ್ರಿಕೂಟಕ್ಕೆ 48 ಸ್ಥಾನಗಳು ಲಭಿಸಿವೆ. ಕಳೆದ ವಾರ ಫಲಿತಾಂಶ ಪ್ರಕಟವಾಗಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್ 14, ಜೆಎಂಎಂ 31 ಹಾಗೂ ಆರ್ಜೆಡಿ 04 ಸ್ಥಾನ ಗಳಿಸಿದ್ದು, ಮೈತ್ರಿಕೂಟದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿರುವ ಜೆಎಂಎಂ ನಾಯಕ ಹೇಮಂತ್ ಸುರೇನ್ ಇಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.
ಕಳೆದ ಬಾರಿ 49 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿದಿದ್ದ ಬಿಜೆಪಿ ಈ ಬಾರಿ ಕೇವಲ 22 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಪ್ರತಿಪಕ್ಷದ ಸ್ಥಾನದಲ್ಲಿ ಕೂರುವುದು ಅನಿವಾರ್ಯವಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದು ಜೆಎಂಎಂ ಈಬಾರಿ ಕಾಂಗ್ರೆಸ್ ಹಾಗೂ ಆರ್ಜೆಡಿ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬರುವಲ್ಲಿ ಸಫಲವಾಗಿದೆ. ಇಂದು ಅಧಿಕಾರ ವಹಿಸಿಕೊಳ್ಳಲಿರುವ ಹೇಮಂತ್ ಸುರೇನ್ ದೇಶದ ಎಲ್ಲ ರಾಜ್ಯಗಳ ಹಿರಿಯ ರಾಜಕೀಯ ನಾಯಕರನ್ನು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದು, ಡಿಕೆ ಶಿವಕುಮಾರ್ ಸಹ ಆಹ್ವಾನಿತರಾಗಿ ತೆರಳಿದ್ದಾರೆ. ಸಮಾರಂಭ ಮುಗಿಸಿ ಸಂಜೆ ಡಿಕೆಶಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.