ಕರ್ನಾಟಕ

karnataka

ETV Bharat / state

ಎಲ್ಲಾ ಇಲಾಖೆಗಳ ಜೊತೆ ಬಜೆಟ್ ಪೂರ್ವಭಾವಿ ಸಭೆ ಪೂರ್ಣ : ಸಿಎಂ ಯಡಿಯೂರಪ್ಪ - Management Budget

ಬಜೆಟ್​ ಸಿದ್ಧತೆ ನಡೆಸಲಾಗುತ್ತಿದೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತಿದ್ದೇವೆ..

CM BS Yeddyurappa
ಸಿಎಂ ಯಡಿಯೂರಪ್ಪ

By

Published : Feb 19, 2021, 12:25 PM IST

ಬೆಂಗಳೂರು :ಎಲ್ಲಾ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಗಳು ಬಹುತೇಕ ಪೂರ್ಣಗೊಂಡಿವೆ. ಬಜೆಟ್ ಸಿದ್ಧತೆ ಒಂದು ರೂಪಕ್ಕೆ ಬರುತ್ತಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬಜೆಟ್‌ ಸಿದ್ಧತೆ ಕುರಿತಂತೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ..

ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಂತರ ಮಾತನಾಡಿದ ಅವರು, ಗೃಹ ಇಲಾಖೆ ಸೇರಿ ಇನ್ನೆರಡು ಇಲಾಖೆಯ ಸಭೆ ನಡೆಸಬೇಕಿದೆ. ಇದಾದ ನಂತರ ಬಜೆಟ್ ಸಿದ್ಧತೆಗಳು ಶುರುವಾಗುತ್ತವೆ. ಏನೇನು ಕೊಡಬಹುದು, ಎಷ್ಟೆಷ್ಟು ಖರ್ಚಾಗಿದೆ ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ.

ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಈಗಾಗಲೇ ಈ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಸ್ಪಷ್ಟಪಡಿಸಿದ್ದೇನೆ. ಪ್ರತಿಯೊಬ್ಬ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದೆ ಯಾವ ರೀತಿ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ ಎಂದರು.

ABOUT THE AUTHOR

...view details