ಬೆಂಗಳೂರು:ವಿವಾದಿತ ಫೇಸ್ಬುಕ್ ಪೋಸ್ಟ್ ವಿಚಾರವಾಗಿ ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ನಡೆದಿದ್ದ ಗಲಭೆ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪ್ರಮುಖ ಆರೋಪಿಯನ್ನ ಬಂಧಿಸಿದೆ. ಗಲಭೆಯಲ್ಲಿ ಭಾಗಿಯಾಗಿ ಬಳಿಕ ತಲೆ ಮರೆಸಿಕೊಂಡಿದ್ದ ಪ್ರಮುಖ ಸಂಚುಕೋರ ಆರೋಪಿ ಸೈಯದ್ ಅಬ್ಬಾಸ್ನನ್ನು ಬಂಧಿಸಲಾಗಿದೆ. ಸೈಯದ್ ಅಬ್ಬಾಸ್ನನ್ನು ಸದ್ಯ 6 ದಿನಗಳ ಕಾಲ ಎನ್ಐಎ ಕಷ್ಟಡಿಗೆ ನೀಡಲಾಗಿದ್ದು, ತನಿಖೆ ಮುಂದುವರೆದಿದೆ.
ಕೆಜಿ ಹಳ್ಳಿ ಗಲಭೆ ಪ್ರಕರಣ: ಪ್ರಮುಖ ಆರೋಪಿ ಸೈಯದ್ ಅಬ್ಬಾಸ್ ಬಂಧನ
ಕಳೆದ ವರ್ಷ ಆಗಸ್ಟ್ನಲ್ಲಿ ನಡೆದಿದ್ದ ಕೆಜಿ ಹಳ್ಳಿ ಗಲಭೆ ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನ ಎನ್ಐಎ ತಂಡ ಬಂದಿಸಿದ್ದು, ತನಿಖೆ ಮರುಜೀವ ಪಡೆದಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ಸಾಮಾಜಿಕ ಜಾಲತಾಣದಲ್ಲಿ ಒಂದು ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದಕ್ಕಾಗಿ ಆಕ್ರೋಶ ಭುಗಿಲೆದ್ದಿತ್ತು, ಬಳಿಕ ಇದು ವಿಕೋಪಕ್ಕೆ ತಿರುಗಿ ಗಲಭೆ ಉಂಟಾಗಿತ್ತು. ಶಾಸಕರ ಮನೆ ಮೇಲೆ ದಾಳಿ ನಡೆಸಿದ್ದಲ್ಲದೇ ಪೊಲೀಸ್ ಠಾಣೆಯ ಮೇಲೂ ದಾಳಿ ಮಾಡಿ ನಾಶ ಮಾಡಲಾಗಿತ್ತು. ಪ್ರಕರಣ ಸಂಬಂಧ 200ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.