ಕರ್ನಾಟಕ

karnataka

ETV Bharat / state

ಮತದಾರರ ಪಟ್ಟಿಗೆ ಶಿಕ್ಷಕರ ಹೆಸರು ನೋಂದಾಯಿಸಲು ತಹಶೀಲ್ದಾರ್ ಸಭೆ

ಶಿಕ್ಷಕರ ಕ್ಷೇತ್ರದ ಮತದಾನ ಪ್ರಮಾಣ ಹೆಚ್ಚಸುವ ನಿಟ್ಟಿನಲ್ಲಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೆ ತಹಶೀಲ್ದಾರ್ ರಘುಮೂರ್ತಿ ನೇತೃತ್ವದಲ್ಲಿ ಶಿಕ್ಷಕರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸುವ ಅರ್ಜಿಗಳನ್ನು ಸ್ಥಳದಲ್ಲೇ ವಿತರಿಸಲಾಯಿತು.

Tahsildar meeting to register the name on the voter list
ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ತಹಶೀಲ್ದಾರ್ ಸಭೆ

By

Published : Feb 6, 2020, 9:56 PM IST

ಬೆಂಗಳೂರು:ಶಿಕ್ಷಕರ ಕ್ಷೇತ್ರದ ಮತದಾನ ಪ್ರಮಾಣ ಹೆಚ್ಚಸುವ ನಿಟ್ಟಿನಲ್ಲಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆಗೆ ತಹಶೀಲ್ದಾರ್ ರಘುಮೂರ್ತಿ ನೇತೃತ್ವದಲ್ಲಿ ಶಿಕ್ಷಕರೊಂದಿಗೆ ಸಭೆ ನಡೆಸಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವ ಅರ್ಜಿಗಳನ್ನು ಸ್ಥಳದಲ್ಲೇ ವಿತರಿಸಲಾಯಿತು.

ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ತಹಶೀಲ್ದಾರ್ ಸಭೆ

ಯಲಹಂಕದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ‌ ಖಾಸಗಿ ಶಾಲೆಗಳ ಮುಖ್ಯಸ್ಥರು, ಮುಖ್ಯೋಪಾಧ್ಯಾಯರು, ಅನುದಾನ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರೊಡನೆ ಸಭೆ ನಡೆಸಿದ ತಹಶೀಲ್ದಾರ್ ರಘುಮೂರ್ತಿ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾವಣೆಗೆ ಅರ್ಜಿ ವಿತರಿಸಿ ಕೂಡಲೇ ಮತದಾರರ ಪಟ್ಟಿಯ ಹೊರಗಿರುವವರನ್ನು ಕೂಡಲೇ ಸೇರಿಸಬೇಕೆಂದು ಮುಖ್ಯಸ್ಥರಿಗೆ ತಾಕೀತು ಮಾಡಿದರು.

ನಂತರ ಮಾತನಾಡಿದ ಅವರು, ಯಲಹಂಕ ತಾಲೂಕಿನಲ್ಲಿ ಕರಡು ಮತದಾರರ ಪಟ್ಟಿ ಸಿದ್ದಪಡಿಸಿದ್ದು, ಶೇ.15ರಿಂದ 20ಭಾಗ ಶಿಕ್ಷಕರು ಮತದಾರರ ಪಟ್ಟಿಯಿಂದ ಹೊರಗಿರುವಂತೆ ಕಂಡುಬರುತ್ತಿದೆ. ಹೀಗಾಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆಗೂಡಿ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಕರೊಡಗೂಡಿ ಸಭೆ ನಡೆಸಿ ಅರ್ಜಿ ನಮೂನೆಗಳನ್ನು ವಿತರಿಸಲಾಗಿದೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಕಡ್ಡಾಯವಿಲ್ಲ. ಆದರೆ, ಎಲ್ಲರಿಗೂ ಹೊಣೆಗಾರಿಕೆ ಇದೆ. ಮುಂಬರುವ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ ಪರಿಪೂರ್ಣವಾಗಿ ನಡೆಯಬೇಕೆಂದರೆ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಮೂಲಕ ಸಾಮೂಹಿಕ ಹೊಣೆಗಾರಿಕೆ ವಹಿಸಿಕೊಂಡು ಮುನ್ನಡೆಯಬೇಕು ಎಂದ ಅವರು ಮುಂಬರುವ ದಿನಗಳಲ್ಲಿ ಯಲಹಂಕ ತಾಲೂಕಿನಲ್ಲಿ ಯಾರೊಬ್ಬರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಬಿಇಓ ಕಮಲಾಕರ್ ಮಾತನಾಡಿ, ಈ ಹಿಂದೆ ತಾಲೂಕಿನಾದ್ಯಂದ ಅರ್ಜಿಗಳನ್ನ ವಿತರಿಸಿ ಕರಡು ಮತದಾರರ ಪಟ್ಟಿ ಸಿದ್ದಪಡಿಸಲಾಗಿತ್ತು. ಆದರೆ, ವರ್ಗಾವಣೆ ಸೇರಿದಂತೆ ಇನ್ನಿತರ ಕಾರಣಗಳಿಂದ ಶೇ.20 ಹೆಸರುಗಳು ನೊಂದಾವಣಿಯಾಗಿಲ್ಲ. ಇದೀಗ ತಹಶೀಲ್ದಾರ್ ನೇತೃತ್ವದಲ್ಲಿ ಶಾಲಾ ಮುಖ್ಯಸ್ಥರ ಜೊತೆ ಸಭೆ ನಡೆಸಿ ಅರ್ಜಿ ನಮೂನೆ ವಿತರಿಸಲಾಗಿದೆ. ವಾಸಸ್ಥಳ ದೃಢೀಕರಣ ಆಧರಿಸಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details