ಬೆಂಗಳೂರು: ಕೊರೊನಾದಿಂದ ಮೃತಪಟ್ಟ ಮಹಿಳೆಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಮಂಗಳೂರು ಶಾಸಕ ಭರತ್ ಶೆಟ್ಟಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂಗೆ ಆಗ್ರಹಿಸಿದ್ದಾರೆ.
ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಶಾಸಕ ಭರತ್ ಶೆಟ್ಟಿ ವಿರುದ್ಧ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ - ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಶಾಸಕ ಭರತ್ ಶೆಟ್ಟಿ ವಿರುದ್ಧ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಸ್ಥಳೀಯ ಶಾಸಕ ಡಾ.ಭರತ್ ಶೆಟ್ಟಿಯವರ ನಡವಳಿಕೆ ಕಾನೂನುಬಾಹಿರ ಮಾತ್ರವಲ್ಲ ಅಮಾನವೀಯವಾದುದು ಕೂಡ ಎಂದು ಕಿಡಿಕಾರಿದ್ದಾರೆ.
ಟ್ವಿಟರ್ ಮೂಲಕ ಭರತ್ ಶೆಟ್ಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕೊರೊನಾ ಸೋಂಕಿತರ ಚಿಕಿತ್ಸೆ ಮತ್ತು ಅಂತ್ಯ ಸಂಸ್ಕಾರದಲ್ಲಿ ತೊಡಗಿರುವ ವೈದ್ಯಕೀಯ ಸಿಬ್ಬಂದಿಯ ರಕ್ಷಣೆಗೆ ಕೇಂದ್ರ ಸರ್ಕಾರ ಹೊಸ ಕಾನೂನು ಜಾರಿಗೊಳಿಸಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ದಕ್ಷಿಣ ಕನ್ನಡದಲ್ಲಿ ಕೊರೊನಾಕ್ಕೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದವರ ವಿರುದ್ಧ ಈ ಕಾನೂನಿನಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ಹೊಸ ಕಾನೂನಿನ ಪ್ರತಿಯನ್ನೂ ಟ್ಯಾಗ್ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಸ್ಥಳೀಯ ಶಾಸಕ ಡಾ.ಭರತ್ ಶೆಟ್ಟಿಯವರ ನಡವಳಿಕೆ ಕಾನೂನುಬಾಹಿರ ಮಾತ್ರವಲ್ಲ ಅಮಾನವೀಯವಾದುದು ಕೂಡ ಎಂದು ಕಿಡಿಕಾರಿದ್ದಾರೆ. ಈ ಶಾಸಕರ ವಿರುದ್ಧ ಸಿಎಂ ತಕ್ಷಣ ಕ್ರಮಕೈಗೊಂಡು ಇಂತಹ ಕೃತ್ಯ ಎಸಗುವವರಿಗೆ ಎಚ್ಚರಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.